ಹಾಸನ

ರಂಗ ಶಿಕ್ಷಣ ಡಿಪ್ಲೋಮಾಅರ್ಜಿ ಆಹ್ವಾನ

Published On :

ಹಾಸನ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯು ರಂಗ ಶಿಕ್ಷಣ ಡಿಪ್ಲೊಮಾಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಈ ಶಿಕ್ಷಣದ ಅವಧಿ ಒಂದು ವರ್ಷ. ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಪದವೀಧರರಿಗೆ ಆದ್ಯತೆಯುಂಟು. ತರಬೇತಿ ಅವಧಿಯಲ್ಲಿ ಊಟ, ವಸತಿ ವ್ಯವಸ್ಥೆ ನೀಡಲಾಗುವುದು. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.
ರಂಗ ಶಿಕ್ಷಣದಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಬೇತಿಗಳು ನಡೆಯುತ್ತವೆ. ಕಳರಿ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ವೀರಗಾಸೆ, ಪ್ರಸಾದನ, ಬೆಳಕಿನ ವಿನ್ಯಾಸ, ರಂಗವಿನ್ಯಾಸ, ವಸ್ತ್ರ ವಿನ್ಯಾಸ ಮುಂತಾದ ಕಾರ್ಯಾಗಾರಗಳ ಜೊತೆಗೆ ಕಾವ್ಯ, ಸಿನಿಮಾ ಮತ್ತು ಚಿತ್ರಕಲೆ ಕುರಿತಾದ ಕಮ್ಮಟಗಳು ನಡೆಯುತ್ತವೆ. ಒಂದು ವರ್ಷದಲ್ಲಿ ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಹಾಗೂ ಪ್ರದರ್ಶನ ನಡೆಯುತ್ತದೆ.
ಆಸಕ್ತರು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ಸಾಣೇಹಳ್ಳಿ-577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ, ವಿಳಾಸಕ್ಕೆ ಬರೆದು ಪ್ರವೇಶ ಪತ್ರ ತರಿಸಿಕೊಳ್ಳಬಹುದು. ಜುಲೈ 1 ಮತ್ತು 2ರಂದು ಬೆಳಗ್ಗೆ 10ಕ್ಕೆ  ಸಾಣೇಹಳ್ಳಿಯ ರಂಗ ಪ್ರಯೋಗ ಶಾಲೆಯಲ್ಲಿ ಸಂದರ್ಶನ ನಡೆಯಲಿದೆ. ಎರಡು ದಿನಗಳ ಕಾಲ ಸಂದರ್ಶನ ನಡೆಯಲಿದ್ದು, ಮೊದಲ ದಿನ ಪ್ರಾಯೋಗಿಕ, ಎರಡನೇ ದಿನ ಮೌಖಿಕ ಪರೀಕ್ಷೆಗಳು ಇರುತ್ತವೆ ಜುಲೈ 15 ರಿಂದ ತರಗತಿಗಳು ಪ್ರಾರಂಭವಾಗುತ್ತವೆ. ಹೆಚ್ಚಿನ ಮಾಹಿತಿಗೆ ದೂ. 08199-243772, 9481345450, 9448398144 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.