ವಿಶ್ವ ಪರಿಸರ ದಿನ ಇಂದು
ಹಾಸನ: ಜಿಲ್ಲಾಡಳಿ, ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ, ನಗರಸಭೆ, ಪ್ರಾದೇಶಿಕ ಸಾರಿಗೆ ಇಲಾಖೆ, ವನ್ಯ ಜೀವಿ ಪರಿಪಾಲಕರ ಸಂಘ, ವ್ಯಕ್ತಿತ್ವ ವಿಕಾಸ ಕೇಂದ್ರ, ನಮ್ಮೂರ ಸೇವೆ ಸಂಘಟನೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಹೊಸ ಬಸ್ ನಿಲ್ದಾಣದ ಎದುರು, ಹಾಸನದಲ್ಲಿ ಬೆಳಿಗ್ಗೆ 8ಕ್ಕೆ ಸಸಿ ನೆಡುವ ಮೂಲಕ ಆಚರಿಸಲಾಗುವುದು. ಇದಕ್ಕು ಮೊದಲು ನಗರದ ಆಯ್ದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿವರ್ಗ, ಸಂಘಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ, ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಇರುತ್ತದೆ. ಬೆಳಗ್ಗೆ 8.30ಕ್ಕೆ ಸದರಿ ಜಾಥಾವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ಆರ್.ಜೆ.ಸತೀಶ್ಸಿಂಗ್ ಉದ್ಘಾಟಿಸುವರು. ಸಭಾ ಕಾರ್ಯಕ್ರಮಗಳು ಬೆಳಿಗ್ಗೆ 10ಕ್ಕೆ ಹಾಸನಾಂಭ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವಿ.ಅನ್ಬು ಕುಮಾರ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸುವರು. ವನ್ಯಜೀವಿ ಪರಿಪಾಲಕ ಎಚ್.ಪಿ. ಮೋಹನ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ಭಟ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಜೆ. ಪದ್ಮಪ್ರಭ, ವಿಜಯಕುಮಾರ್, ಪರಿಸರ ನಿರ್ದೇಶಕ ಶಿವಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಹಲ್ಮಿಡಿಯಲ್ಲಿ 46 ಮಕ್ಕಳಿಗೆ ಅಕ್ಷರ ಅಭ್ಯಾಸ
ಬೇಲೂರು: ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಕನ್ನಡ ಭಾಷೆ ಅಳಿವಿನ ಅಂಚಿಗೆ ಸಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಭಾಷಾ ಸಂಸ್ಕೃತಿ ಇನ್ನು ಜೀವಂತವಾಗಿದೆ ಎಂದು ಬೆಂಗಳೂರು ದಟ್ಸ್ ಕನ್ನಡ ವಿಭಾಗದ ಮುಖ್ಯಸ್ಥ ಶ್ಯಾಮಸುಂದರ್ ತಿಳಿಸಿದರು. ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ದಿ ಸ್ಕಾಲರ್ಸ್ ವರ್ಡ್ ಸ್ಕೂಲ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ 46 ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಒಂದು ಭಾಷೆ ತನ್ನ ಅವನತಿಗೆ ತಲುಪುವ ಜತೆಯಲ್ಲೆ ಭಾಷಾ ಸಂಸ್ಕೃತಿಯನ್ನು ನಾಶಪಡಿಸುತ್ತದೆ. ಕನ್ನಡ ಭಾಷೆಯಲ್ಲಿ ವಿಭಿನ್ನ ಮತ್ತು ವೈವಿಧ್ಯತೆ ಸಂಸ್ಕೃತಿ ಇದೆ ಎಂದು ಹೇಳಿದರು. ಕನ್ನಡ ಪ್ರಥಮ ಶಾಸನ ನೀಡಿದ ಹಲ್ಮಿಡಿ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಬೇಕೆಂದು ಮನವಿ ಮಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ಆನಂದ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಜನಾರ್ದನ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

