ಶಿಕ್ಷಕರ ಅರ್ಹತಾ ಪರೀಕ್ಷೆ: ಅರಿವು ಕಾರ್ಯಾಗಾರ 7 ರಿಂದ
ಹಾಸನ: ಜೂನ್ 7 ಮತ್ತು 10ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಕೆಳಕಂಡ ತಾಲೂಕು ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮ ಇರುತ್ತದೆ. ಈಗಾಗಲೇ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳು ಖುದ್ದಾಗಿ ಈ ಕೆಳಕಂಡ ಸ್ಥಳಗಳಲ್ಲಿ ಹಾಜರಾಗಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದು ಪಿ. ಪದ್ಮಮ್ಮ, ಪ್ರಾಂಶುಪಾಲರು, ಡಯಟ್, ಹಾಗೂ ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ಧಿ), ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಸನ ಇವರು ಕೋರಿದ್ದಾರೆ.
ಜೂನ್ 7ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಆಲೂರು ಮತ್ತು ಸಕಲೇಶಪುರ ತಾಲೂಕುಗಳ ಅಭ್ಯರ್ಥಿಗಳಿಗೆ ಸಕಲೇಶಪುರದ ಸೇಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
ಅದೇ ರೀತಿ ಹೊಳೆನರಸೀಪುರ ತಾಲೂಕಿನ ಅಭ್ಯರ್ಥಿಗಳಿಗೆ ಎಚ್.ಪಿ.ಎಸ್. ಕರ್ನಾಟಕ ಬ್ಯಾಂಕ್ ಶಾಖೆ, ಹೊಳೆನರಸೀಪುರದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಚನ್ನರಾಯಪಟ್ಟಣ ತಾಲೂಕಿನ ಅಭ್ಯರ್ಥ್ಥಿಗಳಿಗೆ ಚನ್ನರಾಯಪಟ್ಟಣದ ಗುರುಭವನದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ..
ಜೂನ್ 7ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಅರಸೀಕೆರೆ ತಾಲೂಕಿನ ಅಭ್ಯರ್ಥಿಗಳಿಗೆ ಅರಸೀಕೆರೆ ಸೆಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಹಾಸನ ತಾಲೂಕಿನ ಅಭ್ಯರ್ಥಿಗಳಿಗೆ ಹಾಸನದ ಶತಮಾನೋತ್ಸವ ಭವನದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಬೇಲೂರು ತಾಲೂಕಿನ ಅಭ್ಯರ್ಥಿಗಳಿಗೆ ಬೇಲೂರು ಮೌಂಟ್ ಕಾರ್ಮೆಲ್ ಶಾಲೆ, ಜೆ.ಪಿ.ನಗರದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ..
ಜೂನ್ 10ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಅರಕಲಗೂಡು ತಾಲೂಕಿನ ಅಭ್ಯರ್ಥಿಗಳಿಗೆ ಅರಕಲ ಗೂಡಿನ ಶಿಕ್ಷಕರ ಭವನದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಎಂದು ಪ್ರಾಂಶುಪಾಲ ಪಿ. ಪದ್ಮಮ್ಮ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

