ಮುಂಡೆಗೆ ತಾಲೂಕು ಬಿಜೆಪಿ ಶ್ರದ್ಧಾಂಜಲಿ
ಅರಸೀಕೆರೆ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದ ಗೋಪಿನಾಥ್ ಮುಂಡೆ ಅಕಾಲಿಕ ಮರಣಕ್ಕೆ ತುತ್ತಾದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಸಂತಾಪ ಸೂಚಿಸಿ ಶ್ರದ್ದಾಂಜಲಿ ಅರ್ಪಿಸಿದರು.
ಪಟ್ಟಣದ ಚಂದ್ರಶೇಖರ್ ಅಜಾದ್ ರಸ್ತೆಯಲ್ಲಿನ ತಾಲೂಕು ಬಿಜೆಪಿ ಅಧ್ಯಕ್ಷ ಹರಳಕಟ್ಟಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂತಾಪ ಸೂಚನಾ ಸಭೆಯ ಪ್ರಾರಂಭದಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸುವ ಮೂಲಕ ಅಗಲಿದ ಸಚಿವರಿಗೆ ಸಂತಾಪ ಸೂಚಿಸಲಾಯಿತು.
ನಂತರ ಸಭೆಯನ್ನು ಉದ್ದೇಶಿಸಿ ಜಿಲ್ಲಾ ಬಿಜೆಪಿ ವಕ್ತಾರ ಎನ್.ಡಿ. ಪ್ರಸಾದ್ ಮಾತನಾಡಿ ಎಬಿವಿಪಿ ವಿದ್ಯಾರ್ಥಿ ನಾಯಕನಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿ ಜನಸಂಘಧ ಮೂಲಕ ರಾಜಕೀಯ ಪ್ರವೇಶಿಸಿ ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷವನ್ನು ಸದೃಢವಾಗಿ ಕಟ್ಟುವಲ್ಲಿ ಕೇಂದ್ರ ಸಚಿವರಾಗಿದ್ದ ಗೋಪಿನಾಥ್ ಮುಂಡೆ ಪರಿಶ್ರಮ ವಹಿಸಿದ್ದರು, 6 ಬಾರಿ ಶಾಸಕರಾಗಿ 3 ಬಾರಿ ಸಂಸತ್ ಸದಸ್ಯರಾಗಿ ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಆಗಿ ಅಪಾರ ಜನಪ್ರಿಯತೆ ಗಳಿಸಿದ್ದರು ಎಂದು ಕಂಬನಿ ಮಿಡಿದರು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜಿ.ವಿ.ಟಿ. ಬಸವರಾಜು ಮಾತನಾಡಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿ ಗ್ರಾಮೀಣ ಅಭಿವೃದ್ಧಿಯ ಬಗ್ಗೆ ಮಹತ್ತರ ಆಕಾಂಕ್ಷೆಗಳನ್ನಿಟ್ಟುಕೊಂಡು ಮಾಜಿ ಪ್ರಧಾನಿ ಅಟಲ್ ಜೀ ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದ ಅವರು, ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಅಕಾಲಿಕ ಮರಣಕ್ಕೆ ತುತ್ತಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಮೃತರ ತತ್ವಾದರ್ಶಗಳ ಸಿದ್ಧಾಂತಗಳ ಮಾರ್ಗದಲ್ಲಿ ನಡೆಯುವ ಮೂಲಕ ರಾಷ್ಟ ಕಟ್ಟುವ ಕಾರ್ಯಗಳಲ್ಲಿ ನಾವುಗಳು ಸಕ್ರಿಯವಾಗಿ ನಡೆದು ಅವರಿಗೆ ನಿಜವಾದ ಶ್ರದ್ಧಾಂಜಲಿ ಅರ್ಪಿಸಬೇಕಾಗಿದೆ ಎಂದು ಹೇಳಿದರು.
ನಗರ ಬಿಜೆಪಿ ಅಧ್ಯಕ್ಷ ಕೆ.ವಿ.ಹಿರಿಯಣ್ಣಯ್ಯ ಮಾತನಾಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಯಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂಬ ಕನಸು ಕಂಡಿದ್ದ ಕೇಂದ್ರ ಸಚಿವರು ತಮ್ಮ ಕನಸು ನನಸು ಆಗುವ ಮುನ್ನವೇ ವಿಧಿಯ ಆಟಕ್ಕೆ ಸಿಕ್ಕಿ ಬಲಿಯಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದ್ದು, ಭಗವಂತ ಮೃತರ ಕುಟುಂಬಕ್ಕೆ ಮತ್ತು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಈ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಎಪಿಎಂಸಿ ಸದಸ್ಯ ಡಿ.ಬಿ.ಗಂಗಾಧರ್, ತಾಲೂಕು ವಕ್ತಾರ ದೇವರಾಜು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

