ತಾಪಮಾನ ಏರಿಕೆಯಿಂದ ಜನರ ಮೇಲೆ ದುಷ್ಪರಿಣಾಮ
ಸಕಲೇಶಪುರ: ಜಾಗತಿಕವಾಗಿ ಏರುತ್ತಿರುವ ತಾಪಮಾನದಿಂದಾಗಿ ಜನರ ದೈನಂದಿನ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗದಿರುವುದು ಬೇಸರದ ಸಂಗತಿ ಎಂದು ಮಲೆನಾಡು ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಕೋರ್ಟ್ ಆವರಣದಲ್ಲಿ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಶೀಘ್ರ ಅಭಿವೃದ್ದಿ ಹೊಂದುವ ಭರದಲ್ಲಿ ಮಾನವ ಪರಿಸರದ ಮೇಲೆ ನಿತ್ಯ ದಬ್ಬಾಳಿಕೆ ನಡೆಸುತ್ತಿದ್ದು, ಕೈಗಾರಿಕೀಕರಣದ ಮೂಲಕ ನೀರು, ಗಾಳಿ, ಪರಿಸರ ಬಾರಿ ಪ್ರಮಾಣದಲ್ಲಿ ಕಲುಷಿತಗೊಳ್ಳುತ್ತಿದೆ, ಭಾರಿ ಪ್ರಮಾಣದಲ್ಲಿ ಅರಣ್ಯ ನಾಶವಾಗುತ್ತಿರುವುದು ಪರಿಸರ ಮಾಲಿನ್ಯದ ಪ್ರಮಾಣ ಹಾಗೂ ಜಾಗತಿಕ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ಇದರ ಬಗ್ಗೆ ಸರಕಾರ ಅಗತ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದ್ದು, ಇದರ ಅರಿವಲ್ಲದಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ಹಿರಿಯ ನ್ಯಾಯಾದೀಶ ಕೃಷ್ಣಯ್ಯ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಉಪವಿಭಾಗಧಿಕಾರಿ ಮಧುಕೇಶ್ವರ್, ಕೀರಿಯ ಶ್ರೇಣಿ ನ್ಯಾಯಧೀಶೆ ಶಿಲ್ಪಾ, ಸರಕಾರಿ ಅಭಿಯೋಜಕಿ ಅಶ್ವಿನಿ, ವಲಯ ಅರಣ್ಯಾಧಿಕಾರಿ ಮಹದೇವ್, ವಕೀಲರ ಸಂಘದ ಅಧ್ಯಕ್ಷ ಆರ್.ಎನ್. ಕೃಷ್ಣಮೂರ್ತಿ, ಶಿವಕುಮಾರ್, ಅನಂದ್, ಅಕ್ರಮ್ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

