'ಸಹಾಯಧನ ವಿತರಣೆಯಲ್ಲ್ಲಿ ತಾರತಮ್ಯ: ಆರೋಪ'
ಅರಸೀಕೆರೆ: ತಾಲೂಕಿನ ಬರಪೀಡಿತ ಪ್ರದೇಶಗಳ ಸಣ್ಣ ಹಿಡುವಳಿದಾರರಿಗೆ ಕಳೆದ ಸಾಲಿನಲ್ಲಿ ನೀಡಬೇಕಾಗಿದ್ದ ಸಹಾಯಧನವನ್ನು ತಾಲೂಕು ಆಡಳಿತ ಸರಿಯಾಗಿ ವಿತರಣೆ ಮಾಡದೆ ನಿರ್ಲಕ್ಷಿಸುತ್ತಿದೆ ಎಂದು ತಾಲೂಕು ಬಿ.ಜೆ.ಪಿ. ಯುವ ಮೋರ್ಚಾ ಅಧ್ಯಕ್ಷ ದುಮ್ಮೇನಹಳ್ಳಿ ರಮೇಶ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ಇದ್ದ ಸಂದರ್ಭದಲ್ಲಿ ರಾಜ್ಯದ ಎಲ್ಲ ಬರಪೀಡಿತ ಪ್ರದೇಶಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನೊಂದ ಕುಟುಂಬಗಳಿಗೆ ಸಹಾಯ ನೀಡಲು ವಿಶೇಷ ಯೋಜನೆಯಲ್ಲಿ ತಾಲೂಕಿಗೆ ಲಕ್ಷಾಂತರ ರು. ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ತಾಲೂಕಿನ 45 ಗ್ರಾಮ ಪಂಚಾಯಿತಿಗಳ ಎಲ್ಲ ಗ್ರಾಮದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀಡಬೇಕಾದ ಸಹಾಯ ದನವನ್ನು ಇನ್ನೂ ಹಲವು ಗ್ರಾಮಗಳ ರೈತರಿಗೆ ನೀಡದೆ ತಾರತಮ್ಯ ನೀತಿಯನ್ನು ಅನುಸರಿಸಿದೆ.
ಅಲ್ಲದೆ ಮಧ್ಯವರ್ತಿಗಳ ಮೂಲಕ ಬಂದ ರೈತರಿಗೆ ಚೆಕ್ ಮೂಲಕ ನೀಡಿರುವ ಹಣದಲ್ಲಿಯೂ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಸಾರ್ವಜನಿಕ ದೂರುಗಳು ವ್ಯಕ್ತವಾಗುತ್ತಿವೆ. ಆದ್ದರಿಂದ ತಾವು ಈ ಬಗ್ಗೆ ತಾಲೂಕು ತಹಸೀಲ್ದಾರ್ಗೆ ಮನವಿ ಸಲ್ಲಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸುವ ಮೂಲಕ ಆರ್ಹ ಫಲಾನುಭವಿ ರೈತರಿಗೆ ತಕ್ಷಣ ಹಣ ನೀಡಬೇಕೆಂದು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.
ತಪ್ಪಿದಲ್ಲಿ ವಂಚನೆಗೆ ಒಳಗಾದ ರೈತರೊಂದಿಗೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನು ತಾವು ತಾಲೂಕು ಆಡಳಿತಕ್ಕೆ ನೀಡಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

