ಹಾಸನ

ಪರಿಸರ ಜಾಗೃತಿ ವಿದ್ಯಾರ್ಥಿಗಳಿಂದಾಗಲಿ

Published On :

ಸಕಲೇಶಪುರ: ಪರಿಸರ ಜಾಗೃತಿಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಪುರಸಭೆ ಪರಿಸರ ಎಂಜಿನಿಯರ್ ಲಕ್ಷ್ಮೀಶ್ ಹೇಳಿದ್ದಾರೆ.ಗುರುವಾರ ಪಟ್ಟಣದ ಆಕ್ಸಫರ್ಡ್ ಶಾಲೆಯಲ್ಲಿ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಿಡನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರು ಅಭ್ಯುದಯ ಹೊಂದುವ ನಿಟ್ಟಿನಲ್ಲಿ ವ್ಯಾಪಕವಾಗಿ ಹಾನಿ ಊಂಟುಮಾಡುತ್ತಿದ್ದು ಗಾಳಿ, ನೀರು ಹಾಗೂ ಪರಿಸರದ ಮೇಲೆ ಮಾನವರು ನಿತ್ಯ ದಾಳಿ ಮಾಡುತ್ತಿದ್ದಾರೆ. ಈ ವರ್ತನೆ ಹೀಗೆ ಮುಂದುವರಿದರೆ ಮುಂದಿನ ಜನಾಂಗ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ  ಎಂದರು. ವಿದ್ಯಾರ್ಥಿಗಳು ಗಿಡನೆಟ್ಟು ಪೋಷಿಸುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದರ ಬಗ್ಗೆ ಜಾಗೃತಿ ಉಂಟು ಮಾಡುವ ಮೂಲಕ ಪ್ಲಾಸ್ಟಿಕ್ ವಾತಾವರಣದಲ್ಲಿ ಸೇರುವುದನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.