ಗೋಮಾಂಸ ಮಾರಾಟ: ಪ್ರತಿಭಟನೆಗೆ ಬಜರಂಗದಳ ಸಜ್ಜು
ಬೇಲೂರು: ಪುರಸಭೆಯ ಕೆಲ ವಾರ್ಡಿನಲ್ಲಿ ಗೋಮಾಂಸ ಮಾರಾಟ ನಡೆಯುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಪುರಸಭೆ ಮುಂಭಾಗ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಾಲೂಕು ಭಜರಂಗದಳದ ಸಂಚಾಲಕ ಅನಿಲ್ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ತಾಲೂಕಿನಲ್ಲಿ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಕೃಷಿಗೆ ಬಳಕೆ ಮಾಡುವ ಎತ್ತುಗಳನ್ನು ಹಾಗೂ ಬೆಲೆ ಭಾಳುವ ಜಾನುವಾರುಗಳನ್ನು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದಾರೆ, ಬೆಣ್ಣೂರು, ನಾರಾಯಣಪುರ, ನವಿಲೆಹಳ್ಳಿ, ಕುಡ್ಲುರು, ಕೋಗಿಲೆಮನೆ, ಹಳೇಬೀಡು ಭಾಗದಲ್ಲಿ ಕಳ್ಳತನವಾಗಿದೆ. ಅದರೆ, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಪ್ರಯೋಜವಾಗಿಲ್ಲ ಎಂದು ಆರೋಪಿಸಿದರು. ತಾಲೂಕಿನಲ್ಲಿ ಸದ್ಯ 200 ಕ್ಕೂ ಹೆಚ್ಚು ಜಾನುವಾರುಗಳು ಕಳ್ಳತನವಾದ ಬಗ್ಗೆ ಮಾಹಿತಿ ಇದೆ, ಆಟೋ ಹಾಗೂ ಲಾರಿಗಳ ಮೂಲಕ ಹೊರ ರಾಜ್ಯಕ್ಕೆ ರಾವನೆ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಪೊಲೀಸ್ ಚೆಕ್ ಪೋಸ್ಟ್ನಲ್ಲಿರುವ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

