ಹಾಸನ

ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ ಪ್ರದಾನ ಸಮಾರಂಭ ಇಂದು

Published On :

ಶ್ರವಣಬೆಳಗೊಳ: ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಪ್ರಾಕೃತ ಜ್ಞಾನಭಾರತಿ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 8ರಂದು  ನಡೆಯಲಿದೆ.
ಇಲ್ಲಿನ ಚಾವುಂಡರಾಯ ಮಂಟಪದಲ್ಲಿ ಅಂದು ಬೆಳಗ್ಗೆ 11ಕ್ಕೆ ಆಯೋಜಿಸಿರುವ ಸಮಾರಂಭದಲ್ಲಿ ಜೈಪುರದ ಪ್ರೊ. ಕಮಲ್‌ಚಂದೆ ಸೋಗಾನಿ ಮತ್ತು ಪುಣೆಯ ಪ್ರೊ. ರಾಮ್‌ಪ್ರಕಾಶ್ ಪೋದ್ದಾರ್ ಅವರಿಗೆ ಪ್ರಶಸ್ತಿ ಪ್ರದಾನ ನೆರವೇರಲಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ಕೆ.ಜೈನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ಸಿ.ಕಬ್ಬಿನ್ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡೋಜ ಹಂ.ಪ.ನಾಗರಾಜಯ್ಯ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.