ಹಾಸನ

ಪ್ರಾಮಾಣಿಕ ಪ್ರಯತ್ನದಿಂದ ಪರಿಸರ ಸಂರಕ್ಷಣೆ ಸಾಧ್ಯ

Published On :


ಹಾಸನ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದು ಕೇವಲ ಘೋಷಣೆಯಾಗಿ ಉಳಿಯದೇ ಪ್ರತಿಯೊಬ್ಬರೂ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಹಸೀಲ್ದಾರ್ ಮಂಜುನಾಥ ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದ ಸುತ್ತಲ ಪರಿಸರದಲ್ಲಿ ಎಂಟಿಎಸ್‌ಎಸ್ ಯೂತ್ಸ್ ಗ್ರೂಪ್ ಹಾಗೂ ಎನ್‌ವೈಕೆ  ಹಾಗೂ ಅರಣ್ಯ ಇಲಾಖೆ, ಆಶ್ರಯದಲ್ಲಿ ವಿಶ್ವಪರಿಸರ ದಿನ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು,  ಪ್ರಸ್ತುತ ದಿನಗಳಲ್ಲಿ ಯುವಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ನಾಮಕಾವಾಸ್ಥೆಗೆ ಮಾತ್ರ ನೋಂದಣಿ ಮಾಡಿಕೊಳ್ಳುತ್ತಿವೆಯೇ ಹೊರತು ಆಗಬೇಕಾದ ಕೆಲಸಗಳತ್ತ ಗಮನ ವಹಿಸದೇ ಇರುವುದು ವಿಪರ್ಯಾಸದ ಸಂಗತಿ ಎಂದರು.  ನಮ್ಮೆಲ್ಲರಿಗೂ ಆಶ್ರಯವಾಗಿರುವ ಪ್ರಕೃತಿಯನ್ನು ನಾವೆಲ್ಲರು ರಕ್ಷಣೆ ಮಾಡಿ ಎಲ್ಲರಿಗು ಶುದ್ದ ಗಾಳಿ, ಜಲ, ಉತ್ತಮ ವಾತವರಣ ಸಿಗುವಂತೆ ಮಾಡಲು ಗಿಡ-ಮರಗಳನ್ನು ನೆಟ್ಟು ಪೋಷಿಸಿ ಇತರೆ ಪ್ರಾಣಿ-ಪಕ್ಷಿಗಳಿಗೂ ಆಶ್ರಯ-ಆಹಾರ ಸಿಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು.


ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

ಬೇಲೂರು:  ಟಿಪ್ಪರ್‌ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ರಸ್ತೆಯ ರಾಯಾಪುರ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಹಾಸನದ ದೊಡ್ಡ ಮಂಡಿಗನಹಳ್ಳಿಯ ರಂಗನಾಥ ಎಂದು ತಿಳಿದು ಬಂದಿದೆ.  ಟಿಪ್ಪರ್ ಹಾಗೂ ಸ್ಕೂಟರ್ ಸವಾರರಿಬ್ಬರೂ ಹಾಸನದ ಕಡೆಯಿಂದ ಬರುತ್ತಿದ್ದರು ಎನ್ನಲಾಗಿದ್ದು, ಟಿಪ್ಪರ್ ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.  ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಮತ್ತೊಬ್ಬ ಗಾಯಾಳುವನ್ನು ಹಾಸನ ಆಸ್ಪತ್ರೆಗೆ ಸೇರಿಸಲಾಗಿದೆ. ಟಿಪ್ಪರ್ ಚಾಲಕನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಸಿಪಿಐ ಗಣೇಶ್, ಪಿಎಸ್‌ಐ ಅಶ್ವಿನ್‌ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.