ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪುನರಾರಂಭ
ಹಾಸನ: ಜನವರಿ 1ಕ್ಕೆ 18 ವರ್ಷ ಪೂರ್ಣಗೊಂಡ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವ ಕಾರ್ಯವನ್ನು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಚುನಾವಣೆ ಪೂರ್ಣಗೊಂಡಿರುವುದರಿಂದ ರಾಜ್ಯಾದ್ಯಂತ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಕಾರ್ಯವನ್ನು ಪುನಾರಂಭಿಸಲಾಗಿದೆ. ಅರ್ಹರು ಹೆಸರು ಸೇರಿಸಲು, ಹೆಸರು, ವಿಳಾಸ, ಇತ್ಯಾದಿಗಳಲ್ಲಿನ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅಥವಾ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ, ಬಿಬಿಎಂಪಿ ವಾರ್ಡ್ ಕಚೇರಿ ಅಥವಾ ತಹಸೀಲ್ದಾರ್ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಢಿಢಿಢಿ.ಢ್ಟಡಿಜ್ಠ್ಠಜ್ಜ.್ಞಛ್ಠ.ಟ್ಝ್ಛಿ.್ಝಟ್ಜಿ ರಲ್ಲಿ ಆನ್ಲೈನ್ನಲ್ಲೂ ಸಲ್ಲಿಸಬಹುದು.
ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ 30 ರಂದು
ಹಾಸನ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಮತ್ತು ಅವುಗಳ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ಎಂಬಿಎ ಮತ್ತು ಎಂಸಿಎ ಕೋರ್ಸ್ಗಳ ಪ್ರವೇಶಕ್ಕೆ ಜೂನ್ 30 ರಂದು ಪ್ರವೇಶ ಪರೀಕ್ಷೆ ನಡೆಸಲು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ. ಪ್ರವೇಶ ಪರೀಕ್ಷೆಯನ್ನು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದವರು ನಡೆಸಲಿದ್ದಾರೆ. ಅರ್ಜಿ ಸಲ್ಲಿಸಲು ಜೂನ್ 24 ಕಡೇ ದಿನ.
ಆನ್ಲೈನ್ಮೂಲಕ ಅರ್ಜಿ ಸಲ್ಲಿಸಲು ಹಾಗೂ ವಿದ್ಯಾರ್ಹತೆ ಬಗ್ಗೆ ಹೆಚ್ಚಿನ ಮಾಹಿತಿಗೆ ಸಹಾಯವಾಣಿ 08453755282 ಅಥವಾ ಢಿಢಿಢಿ.್ಠ್ಛ್ಡಛಿ.ಛ್ಛ.್ಝಟಿ ಝಡಿಡಿಠಣಣಣಢಿಢಿಢಿ.್ಠ್ಛ್ಡಛಿ.ಛ್ಛ.್ಝಟಿಣ ಈ ವೆಬ್ಸೈಟ್ ನೋಡಬಹುದು. ಮಾಹಿತಿಗೆ: 09483505203ಗೆ ಕರೆ ಮಾಡಬಹುದು ಅಥವಾ ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ, ಮೈಸೂರು-06 (ದೂ. 0821-2516844.)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

