ಎಸ್ಬಿಐ ಕ್ಲರಿಕಲ್ ಹುದ್ದೆಗೆ ತರಬೇತಿ
ಹಾಸನ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ವತಿಯಿಂದ ನಡೆಯುತ್ತಿರುವ ಬಿಜಿಎಸ್ ಸ್ಟಡಿ ಸೆಂಟರ್ನಲ್ಲಿ ಎಸ್ಬಿಐ ಬ್ಯಾಂಕ್ ಕ್ಲರಿಕಲ್ ಹುದ್ದೆಗೆ ತರಬೇತಿ ನೀಡಲಾಗುವುದು. ಆಸಕ್ತರು ಕೂಡಲೇ ಹೆಸರು ನೋಂದಣಿ ಮಾಡಿಕೊಳ್ಳಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಬಿಜಿಎಸ್ ಸ್ಟಡಿ ಸೆಂಟರ್, ಶ್ರೀ ಆದಿಚುಂಚನಗಿರಿ ಇಂಗ್ಲಿಷ್ ಶಾಲೆ, ರವೀಂದ್ರನಗರ, ಹಾಸನ, ಮೊ.ಸಂ. 9738334784 / 8050839482.
ಕಾವೇರಿ: ವಿರೋಧ
ಮೈಸೂರು: ಕರ್ನಾಟಕಕ್ಕೆ ಮರಣ ಶಾಸನದಂತಿರುವ ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಗೆ ಸರ್ವಜನಾಂಗ ಹಿತರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಬೆಂಬಲ ಪಡೆಯುವ ಸಲುವಾಗಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ವಿಧಾನ ಮಂಡಲದ ಉಭಯ ಸದನಗಳನ್ನು ಕರೆದು ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕೊಂಡೊಯ್ಯಬೇಕು. ರಾಜ್ಯದ ನೆಲ, ಜಲ ವಿಷಯಗಳು ಬಂದಾಗ ಸರ್ವ ಪಕ್ಷಗಳು ಯಾವುದೇ ಒತ್ತಡಕ್ಕೆ ಮಣಿಯದೆ ಹೋರಾಡಲು ಸಜ್ಜಾಗಬೇಕು ಎಂದು ಅಧ್ಯಕ್ಷ ವೇಣುಗೋಪಾಲ್ ಮನವಿ ಮಾಡಿದ್ದಾರೆ.
ಅಕ್ರಮ ಮದ್ಯ : ಬಂಧನ
ಅರಕಲಗೂಡು: ತಾಲೂಕಿನ ಬಂದಿಗನಹಳ್ಳಿಗ್ರಾಮದ ಹತ್ತಿರ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, 1,642 ರು. ಬೆಲೆಯ ಮದ್ಯ ವಶಪಡಿಸಿಕೊಂಡಿದ್ದಾರೆ.
ಮದನೂರು ಗ್ರಾಮದ ತಮ್ಮಣ್ಣಗೌಡ(60) ಬಂಧಿತ ವ್ಯಕ್ತಿ. ಖಚಿತ ಮಾಹಿತಿ ಹಿನ್ನಲೆಯಲ್ಲಿ ಕೊಣನೂರು ಠಾಣೆಯ ಎಎಸ್ಐ ಸುಬ್ಬರಾಜೇ ಅರಸ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳು ದಂಧೆ : ಸೆರೆ
ಹಾಸನ: ಆಲೂರು ತಾಲೂಕಿನ ಬಿ.ಎಂ. ರಸ್ತೆ, ಯಡೂರು ಕ್ರಾಸ್ ಹತ್ತಿರ ಆಲೂರು ಠಾಣೆಯ ಪಿಎಸ್ಐ ಲಕ್ಷ್ಮಣಗೌಡ ಗಸ್ತಿನಲ್ಲಿದ್ದ ವೇಳೆ ಆಲೂರು ಕಡೆಯಿಂದ ಬಂದ ಮರಳು ಲಾರಿಯನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ, ಚಾಲಕ ಬಳಿ ಮರಳು ತುಂಬಲು ಪರವಾನಗಿ ಇಲ್ಲದಿದ್ದುದು ತಿಳಿದು ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಹೊಸಕೋಟೆ ಮಲ್ಲಾಪುರ ಗ್ರಾಮದ ಸಂತೋಷ (25) ಬಂಧಿತ ವ್ಯಕ್ತಿ. ಆತನನ್ನು ವಿಚಾರಣೆಗೊಳಪಡಿಸಿದಾಗ ಯಾವುದೇ ಪರವಾನಗಿ ಇಲ್ಲದೆ ಹೇಮಾವತಿ ನದಿಯಲ್ಲಿ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ತೆಗೆದು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾನೆ.
ಮರಳು ಸಮೇತ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

