ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ
ಹಾಸನ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.40ರಷ್ಟು ಅಂಕಗಳಿಂದ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಶೇ.35ರಷ್ಟು ಅಂಕ ಪಡೆದು ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಸರ್ಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖಾ ವತಿಯಿಂದ ಮಂಗಳೂರಿನಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು-575003, ದೂರವಾಣಿ-0824-2425873 ಇಲ್ಲಿಂದ ಕಚೇರಿ ಸಮಯದಲ್ಲಿ ಪಡೆಯಬಹುದು. ಜೂನ್ 30 ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

