ಹಾಸನ

ಜಾನಪದ ಪರಿಷತ್‌ನಿಂದ ಪ್ರತಿಭಾನ್ವಿತರಿಗೆ ಸನ್ಮಾನ

Published On :

ಹೊಳೆನರಸೀಪುರ: ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಾಲೂಕಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ  ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರ ಜನ್ಮ ಶತಮಾನೋತ್ಸವ ಪ್ರಯುಕ್ತ ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಘಟಕ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು.
ಸಮಾರಂಭ ಉದ್ಘಾಟಿಸಿದ ಶಿಕ್ಷಣ ಸಂಯೋಜಕಿ ಲೀಲಾ, ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಅಭಿನಂದಿಸುತ್ತಿರುವ ಕರ್ನಾಟಕ ಜಾನಪದ ಪರಿಷತ್ತನ್ನು ಶ್ಲಾಘಿಸಿದರು. ಮಕ್ಕಳ ಪ್ರತಿಭೆಯನ್ನು ಈ ರೀತಿ ಗುರುತಿಸುವುದರಿಂದ ಮಕ್ಕಳಲ್ಲಿನ ಉತ್ಸಾಹ ಹೊರಹೊಮ್ಮಲು ಸಹಕಾರಿಯಾದಂತಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪುರಸಭೆಯ ಪರಿಸರ ಅಭಿಯಂತ ಅರ್ಚನಾರಾಧ್ಯ ಮಾತನಾಡುತ್ತ, ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದಿರುವುದಕ್ಕೆ ಅಭಿನಂದಿಸುತ್ತ 1972ರಲ್ಲಿ ವಿಶ್ವ ಪರಿಸರ ದಿನ ಆಚರಣೆಗೆ ಬಂತು, ಪ್ರತಿ ವರ್ಷ ವಿದ್ಯಾರ್ಥಿಗಳಾದ ತಾವುಗಳು ಹುಟ್ಟಿದ ಹಬ್ಬವನ್ನು ಹೇಗೆ ಆಚರಿಕೊಳ್ಳುತ್ತೀರೋ ಅದೇ ರೀತಿ ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಶ್ವ ಪರಿಸರ ದಿನದ ನೆನಪಿಗಾಗಿ ಒಂದೊಂದು ಗಿಡವನ್ನು ನೆಡುವುದರ ಮೂಲಕ ತಾವು ಎಷ್ಟು ವರ್ಷ ಬದುಕಿರುತ್ತೀರೋ ಅಷ್ಟೂ ವರ್ಷ ಗಿಡ ನೆಡುತ್ತ ಬಂದರೆ ಈ ದೇಶದಲ್ಲಿ ಮರಗಿಡಗಳು ಹಾಳಾಗುವ ಸಂದರ್ಭವೇ ಬರುವುದಿಲ್ಲ. ಪರಿಸರ ನಾಶದಿಂದ ಇವತ್ತು ಏನೆಲ್ಲಾ ವಿಪತ್ತುಗಳು ಉಂಟಾಗುತ್ತಿವೆಯೋ ಅವುಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ತಿಳಿಸುತ್ತ ಪರಿಸರ ಉಳಿಸಿ ಬೆಳಸುವ ಪ್ರಯತ್ನ ಮಾಡಬೇಕಾಗಿದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಸ್.ಪುಟ್ಟಸೋಮಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪಟ್ಟಣದ ರೋಟರಿ ಅಧ್ಯಕ್ಷ ರೊ.ಆರ್. ಬಿ. ಪುಟ್ಟೇಗೌಡ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಬಾ.ರಾ.ಸುಬ್ಬರಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತ್ಯನಾರಾಯಣ ಬಾಪು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಕೂಡಿ ಚಂದ್ರಶೇಖರ್ ಸ್ವಾಗತಿಸಿದರು. ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ುಂಜೇವು ಅಣ್ಣಾಜಪ್ಪ ವಂದಿಸಿದರು. ದಿಲೀಪ್ ಜೈನ್, ಜಿ.ಪಿ.ಮಂಜುನಾಥಗುಪ್ತ, ಎಚ್.ಎಸ್.ವಿಜಯಕುಮಾರ್ ಪ್ರತಿಭಾ ಪುರಸ್ಕಾರ ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.