ಹಾಸನ

ಬಿ.ಎ., ಬಿಕಾಂ ಪ್ರವೇಶ ಪ್ರಕ್ರಿಯೆ ಪ್ರಾರಂಭ

Published On :

ಜಾವಗಲ್: ಹೋಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2014-15ನೇ ಸಾಲಿಗೆ ಬಿಎ., ಬಿ.ಕಾಂ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಪ್ರಾಂಶುಪಾಲ ಡಾ. ಕೆ.ಭಾಷಾ ತಿಳಿಸಿದ್ದಾರೆ. ಇತಿಹಾಸ, ಅರ್ಥಶಾಸ್ತ್ರ, ಸಮಾಜ ಶಾಸ್ತ್ರ, ರಾಜ್ಯಶಾಸ್ತ್ರ ವಿಷಯಗಳನ್ನೊಳಗೊಂಡ ಸಂಯೋಜನೆಗಳು ಬಿ.ಎ ವಿಭಾಗದಲ್ಲಿ ಅಧ್ಯಯನಕ್ಕೆ ಲಭ್ಯವಿದೆ. ವಾಣಿಜ್ಯ ಪದವಿಗೆ ಹೆಚ್ಚಿನ ಬೇಡಿಕೆಯ ದೃಷ್ಟಿಯಿಂದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೂ ಬಿ.ಕಾಂ ಗೆ ಪ್ರವೇಶ ನೀಡುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಉತ್ತಮ ಗ್ರಂಥಾಲಯ, ಮೂಲ ಸೌಲಭ್ಯಗಳ ವ್ಯವಸ್ಥೆಯಿದ್ದು, ಸತತವಾಗಿ ಶೇ.100 ರಷ್ಟು ಫಲಿತಾಂಶ ಹೊಂದಿರುವ ಕಾಲೇಜಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್, ಅಂತರ್ಜಾಲ, ಇಂಗ್ಲಿಷ್ ಭಾಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ತರಬೇತಿ ಸೌಲಭ್ಯ, ವಿದ್ಯಾರ್ಥಿವೇತನ ಮತ್ತಿತರ ಸೌಲಭ್ಯಗಳನ್ನು ಹೊಂದಿರುವ ಕಾಲೇಜಿನಲ್ಲಿ ಪ್ರವೇಶ ಪಡೆದುಕೊಂಡು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.