ಆಭರಣ ಆಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ
ಅರಸೀಕೆರೆ: ಇತ್ತೀಚಿಗೆ ಕಳ್ಳರ ಹಾವಳಿ ಹೆಚ್ಚುತ್ತಿದ್ದು, ಚಿನ್ನ, ಬೆಳ್ಳಿ ಅಂಗಡಿಗಳಲ್ಲಿ ವರ್ತಕರು ಸಿಸಿ ಕ್ಯಾಮರಾ ಅಳವಡಿಸುವಂತೆ ನಗರ ಠಾಣಾ ಇನ್ಸ್ಪೆಕ್ಟರ್ ನಂದಕುಮಾರ್ ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮೆರಾ ಅಳವಡಿಕೆ ಅನಿವಾರ್ಯವಾಗಿದ್ದು ತಮ್ಮ ಅಂಗಡಿಗಳ ಸುತ್ತಮುತ್ತ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಬಗ್ಗೆ ಗಮನ ಹರಿಸಬೇಕು ಹಾಗೂ ಪೊಲೀಸ್ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಬೇಕೆಂದರು.
ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗಾಗಿ ಅರ್ಜಿ
ಮಂಡ್ಯ: ಮಕ್ಕಳ ಅಭಿವೃದ್ಧಿ, ರಕ್ಷಣೆ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅಸಾಧರಣ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2014 ನೇ ವರ್ಷದಲ್ಲಿ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವ್ಯಕ್ತಿ ಸಂಸ್ಥೆಗಳು ಮಂಡ್ಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ನಿಗದಿತ ನಮೂನೆಯ ಅರ್ಜಿ ಪಡೆದು ದಾಖಲಾತಿ ಜತೆ ಜೂನ್ 11 ರ ಒಳಗಾಗಿ ಹಿಂದಿರುಗಿಸಲು ಉಪ ನಿರ್ದೇಶಕರು ತಿಳಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಮೂವರು ಹಲ್ಲೆ ಆರೋಪಿಗಳ ಬಂಧನ
ಶ್ರೀರಂಗಪಟ್ಟಣ: ತಾಲೂಕಿನ ಪಿ.ಹೊಸಹಳ್ಳಿ ಪಂಪ್ ಹೌಸ್ ವೃತ್ತದ ಬಳಿ ಮಾ.23 ರಂದು ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕೆಆರ್ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸ ಆನಂದೂರು ಗ್ರಾಮದ ಅಭಿಜಿತ್ (23) ಗಂಗಾ (24), ಇಂಬ್ರಾನ್ (22) ಬಂಧಿತರು. ಇದೇ ಗ್ರಾಮದ ಅರುಣ್ ಮೇಲೆ ಮಾ. 23ರ ರಾತ್ರಿ ಪಂಪ್ ಹೌಸ್ ವೃತ್ತದ ಬಳಿ ಚಾಕು ಮತ್ತು ರಾಡಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿ ನಂತರ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪಟ್ಟಣದ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ವಿಚಾರಣೆಗಾಗಿ ನ್ಯಾಯಾಧೀಶರು ಮತ್ತೇ ಪೊಲೀಸರ ವಶಕ್ಕೆ ನೀಡಿದ್ದಾರೆ.
150 ಅಡಿ ಪ್ರಪಾತಕ್ಕೆ ಲಾರಿ, ಪಾರಾದ ತಾಯಿ- ಮಗು
ಪಾಂಡವಪುರ: ಪ್ರವಾಸಿಗರನ್ನು ಕರೆ ತಂದಿದ್ದ ಲಾರಿ ಸುಮಾರು 150 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿರುವ ಪರಿಣಾಮ ಚಾಲಕ ತೀವ್ರ ಗಾಯಗೊಂಡು, ತಾಯಿ-ಮಗು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ತೊಣ್ಣೂರುಕೆರೆಯಲ್ಲಿ ಭಾನುವಾರ ಜರುಗಿದೆ. ಚನ್ನಪಟ್ಟಣದಿಂದ ಸುಮಾರು 40 ಮಂದಿ ಮುಸ್ಲಿಂ ಕುಟುಂಬದವರು ಬಾಬಾ ಬುಡನ್ಗಿರಿ, ಜೋಗದ ಜಲಪಾತ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ವಾಪಸ್ ಚನ್ನಪಟ್ಟಣಕ್ಕೆ ತೆರಳುವ ಮುನ್ನ ತಾಲೂಕಿನ ಪ್ರವಾಸಿ ತಾಣ ಕೆರೆ ತೊಣ್ಣೂರಿಗೆ ಆಗಮಿಸಿ ಸಮೀಪದಲ್ಲಿಯೇ ಇರುವ ದರ್ಗ ವೀಕ್ಷಣೆಗಾಗಿ ತಾಯಿ ಮಗು ಬಿಟ್ಟು ಲಾರಿಯಲ್ಲಿದ್ದವರೆಲ್ಲಾ ಕೆಳಗಿಳಿದು ಹೋಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

