ಪ್ರಾಕೃತ ವಿವಿ ಸ್ಥಾಪಿಸಲು ಹಂಪನಾ ಆಗ್ರಹ
ಚನ್ನರಾಯಪಟ್ಟಣ: ರಾಷ್ಟ್ರದ ಪುರಾತನ ಭಾಷೆಯೆನಿಸಿದ ಪ್ರಾಕೃತ ಭಾಷೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸಾಹಿತಿ ಹಂಪ ನಾಗರಾಜಯ್ಯ ತಿಳಿಸಿದರು.
ಶ್ರವಣಬೆಳಗೊಳದ ಚಾವುಂಡರಾಯ ವೇದಿಕೆಯಲ್ಲಿ ಶ್ರೀಮಠದ ಪ್ರಾಕೃತ ಅಧ್ಯಯನ ಹಾಗೂ ಸಂಶೋಧನ ಸಂಸ್ಥೆ ಏರ್ಪಡಿಸಿದ್ದ ಪ್ರಾಕೃತ ಜ್ಞಾನಭಾರತಿ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವನ್ನು ತಾವಿಂದು ಮುಂದಿನ ಪೀಳಿಗೆಗೆ ನೀಡಬೇಕಾದರೆ ಪ್ರಾಕೃತ ಭಾಷೆಯ ಭಾಷಾಂತರ ಅತ್ಯವಶ್ಯಕವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಾಕೃತ ವಿಶ್ವ ವಿದ್ಯಾನಿಲಯಗಳನ್ನು ತೆರೆಯಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸರ್ಕಾರದ ನಿರ್ಲಕ್ಷ್ಯ: ಪ್ರಾಕೃತ ವಿಶ್ವವಿದ್ಯಾನಿಲಯ ತೆರೆಯುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಅನುಕೂಲ ಕಾಣದಿರುವುದನ್ನು ಗಮನಿಸಿದರೆ ಸರ್ಕಾರ ಈ ಬಗ್ಗೆ ನಿರ್ಲಕ್ಷ ತೋರುತ್ತಿರುವುದು ಗೋಚರವಾಗುತ್ತದೆ. ಯೀ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಈ ಬಗ್ಗೆ ಆಸಕ್ತಿ ತೋರದಿದ್ದರೆ ಚಳವಳಿಯೇ ಮುಂದಿನ ಗುರಿಯಾಗುತ್ತದೆ ಎಂದರು.
ಪ್ರಾಕೃತ ಭಾಷೆಯನ್ನು ಉಳಿಸಿ ಬೆಳೆಸುವುದಲ್ಲದೆ ಪ್ರಾಕೃತ ಭಾಷೆಯ ಸಂಶೋಧನೆಯಲ್ಲಿ ತೊಡಗಿರುವ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪ್ರಾಕೃತ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರಕ್ಕೆ ಪ್ರಾಕೃತ ವಿಶ್ವವಿದ್ಯಾನಿಲಯ ತೆರೆಯಲು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಪ್ರಾಚೀನ ಭಾಷೆ ಪ್ರೋತ್ಸಾಹಿಸಿ: ಶ್ರೀ ಕ್ಷೇತ್ರದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ಯುವಜನತೆ ಪ್ರಾಚೀನ ಭಾಷೆಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಅವುಗಳ ಅಧ್ಯಯನ ಮಾಡಲು ಹಿನ್ನಡೆ ತೋರುತ್ತಿದ್ದಾರೆ ಎಂದು ವಿಷಾಧಿಸಿದರು.
ಪುಣೆಯ ಭಂಡರ್ಕರ್ ಓರಿಯಂಟಲ್ ಸಂಶೋಧನ ಸಂಸ್ಥೆಯ ರಾಮ್ ಪ್ರಕಾಶ್ ಪೊದರ್ ಅವರಿಗೆ 2 ಲಕ್ಷ ನಗದು, ಪ್ರಶಸ್ತಿ ಪತ್ರ ನೀಡಿ 2013ನೇ ಸಾಲಿನ ಪ್ರಾಕೃತ ಜ್ಞಾನಭಾರತಿ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ರಾಜ್ಯ ಹೈ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಾದೀಶರಾದ ಎನ್.ಕೆ ಜೈನ್ ಪ್ರದಾನ ಮಾಡಿ ಗೌರವಿಸಿದರು.
ನಿವೃತ್ತ ನ್ಯಾ. ಎ.ಸಿ ಕಬ್ಬಿನ್, ಬಾಹುಬಲಿ ಪ್ರಾಕೃತ ವಿದ್ಯಾಪೀಠದ ಕಾರ್ಯಾದ್ಯಕ್ಷರಾದ ಎಂ.ಜೆ ಇಂದ್ರಕುಮಾರ್, ನಿರ್ದೇಶಕ ರಮೇಶ್ ಚಂದ್ರ ಜೈನ್, ಪ್ರಾಕೃತ ವಿದ್ಯಾ ಪೀಠದ ಟ್ರಸ್ಟಿ ಪ್ರೇಮ್ ಸುಮನ್ ಜೈನ್, ಹಾಗೂ ಜಿತೇಂದ್ರ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

