ಹೊನ್ನವಳ್ಳಿಯಲ್ಲಿ ಗ್ರಾಮ ತರಬೇತಿ
ಆಲೂರು: ಪ್ರಸಕ್ತ ಸಾಲಿನ ಭೂಚೇತನ ಯೋಜನೆಯಡಿ ತರಬೇತಿ ಕಾರ್ಯಕ್ರಮವನ್ನು ತಾಲೂಕು ಪಾಳ್ಯ ಹೋಬಳಿ ಹೊನ್ನವಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷತೆ ವಹಿಸಿದ್ದ ಪಾಳ್ಯ ಗ್ರಾಮ ಪಂಚಾಯ್ತಿ ಸದಸ್ಯ ಪುಟ್ಟಸ್ವಾಮಿ ಮಾತನಾಡಿ, ರೈತ ಸಂಪರ್ಕ ಕೇಂದ್ರದಲ್ಲಿ ದೊರೆಯುವ ತಾಂತ್ರಿಕ ಮಾಹಿತಿಗಳನ್ನು ಪಡೆದು ಬೆಳೆ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಬೇಕೆಂದು ರೈತರಿಗೆ ಸಲಹೆ ನೀಡಿದರು. ಮುಖಂಡ ಹೊನ್ನಯ್ಯ ಮಾತನಾಡಿದರು. ಧರ್ಮಪ್ಪ, ದ್ಯಾವಪ್ಪ, ನಂಜಪ್ಪ, ಕುಮಾರೇಗೌಡ, ಸುಶೀಲಮ್ಮ, ವಸಂತಕುಮಾರ್ ಇತರರು ಇದ್ದರು.
'ಪರಿಸರದ ಕಾಳಜಿ ಅಗತ್ಯ'
ಆಲೂರು: ಮಿತಿ ಮೀರಿದ ಇಂಧನದ ಬಳಕೆಯಿಂದಾಗಿ ನೈಸರ್ಗಿಕ ಇಂಧನ ಮೂಲಗಳು ಕಡಿಮೆಯಾಗುತ್ತಿದೆ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ನೀಲಫರ್ ಹೇಳಿದರು. ಅವರು ಪಟ್ಟಣದ ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ 41ನೇ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಶಆಲಾ ಮುಂಭಾಗದಲ್ಲಿ ಗಿಡ ನೆಟ್ಟು ಮಾತನಾಡಿದ ಅವರು, ಮರಗಳನ್ನು ನೆಟ್ಟು ಬೆಳೆಸಿದರೆ ಉತ್ತಮವಾದ ಆರೋಗ್ಯ ಪ್ರಾಪ್ತಿಯಾಗುತ್ತ, ಭೂ ಸವಕಳಿ ಆಗುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

