ಐಟಿಐ: ಶೇ.100 ಫಲಿತಾಂಶ
ಅರಸೀಕೆರೆ: ತಾಲೂಕಿನ ಮಾಡಾಳು ಗ್ರಾಮದ ಬಸವೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಳೆದ ಫೆಬ್ರವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಪರೀಕ್ಷೆ ಬರೆದ 36 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ. 100 ರಷ್ಟು ಫಲಿತಾಂಶ ಲಭ್ಯವಾಗಿದೆ ಎಂದು ವಿದ್ಯಾ ಸಂಸ್ಥೆಯ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದ್ದಾರೆ. ಫಿಟ್ಟರ್ ವಿಭಾಗದಲ್ಲಿ ರಾಕೇಶ್ 599 ಅಂಕ ಗಳಿಸಿ ಶೇ.85.57ರಷ್ಟು ಮತ್ತು ಎಲೆಕ್ಟ್ರಾನಿಕ್ ವಿಭಾಗದಲ್ಲಿ ಡಿ.ಎಸ್ ಸುನಿಲ್ 613 ಅಂಕಗಳಿಸಿ ಶೇ.87.57ರಷ್ಟು ಫಲಿತಾಂಶ ದೊರೆತಿದ್ದು, ಇನ್ನುಳಿದ 4ಮಂದಿ ಅತ್ಯುನ್ನತ ಶ್ರೇಣಿಯಲ್ಲೂ ಉಳಿದ 30 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳನ್ನು ಸ್ವಾಮೀಜಿ ಅಭಿನಂದಿಸಿದ್ದಾರೆ.
ಪ್ರತ್ಯೇಕ ಅಪಘಾತ ಇಬ್ಬರ ಸಾವು
ಹಾಸನ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾರು ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ತಗಡೂರು ಗ್ರಾಮದ ಟಿ.ಪಿ.ಶಿವರುದ್ರಪ್ಪ(68)ಸ್ಥಳದಲ್ಲಿಯೇ ಮೃಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಹೋಬಳಿ, ಮಟ್ಟನವಿಲೆ ವೃತ್ತ ಎನ್. ಎಚ್. ಬಿ.ಎಂ. ರಸ್ತೆಯಲ್ಲಿ ನಡೆದಿದೆ. ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಹೋತನಹಳ್ಳಿಪುರ ಗ್ರಾಮದ ಸುರಭಿ(5) ಮೃತಪಟ್ಟ ಘಟನೆ ಬೈರಾಪುರ-ಮಗ್ಗೆ ರಸ್ತೆಯ ಹೋತನಹಳ್ಳಿಪುರದ ಶನಿದೇವರ ದೇವಸ್ಥಾನದ ಹತ್ತಿರ ನಡೆದಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕ ನಾಪತ್ತೆ
ಹಾಸನ: ನಗರದ ಸರ್ಕಾರಿ ಬಾಲಕರ ಬಾಲಮಂದಿರದ ಜಗದ್ಗುರು (9) ಜೂ.5ರಂದು ಬಾಲಮಂದಿರದಿಂದ ಶಾಲೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ಇದುವರೆಗೂ ವಾಪಸ್ಸಾಗದೆ ನಾಪತ್ತೆಯಾಗಿದ್ದಾನೆ. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳಪೆ ಕಾಮಗಾರಿ: ನಿವಾಸಿಗಳ ಆರೋಪ
ಬೇಲೂರು: ಪಟ್ಟಣದ ಹೊಳೆ ಬೀದಿಯಲ್ಲಿ ಪುರಸಭೆಯಿಂದ ರಸ್ತೆಗೆ ಹಾಕಿರುವ ಡಾಂಬರ್ ಹಾಕಿದ 1 ದಿನದಲ್ಲೇ ಕಿತ್ತು ಬರುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಹೊಳೆ ಬೀದಿ ನಿವಾಸಿ ಶಿವರಾಜ್, ಕಾಮಗಾರಿ ಕಳಪೆಯಾಗಿದೆ. ಯೋಜನೆಯಂತೆ ಡಾಂಬರೀಕರಣ ನಡೆದಿಲ್ಲ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

