ಹಾಸನ

ನಾರಾಯಣಗೌಡ ಹುಟ್ಟುಹಬ್ಬ ಆಚರಣೆ

Published On :

ಅರಸೀಕೆರೆ:  ನಾಡು-ನುಡಿ ರಕ್ಷಣೆಗಾಗಿ ಹೊರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆ ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಶಾಖೆಗಳನ್ನು ಹೊಂದಿರುವ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಪುರಸಭಾಧ್ಯಕ್ಷ ಮೋಹನ್ ಕುಮಾರ್ ತಿಳಿಸಿದರು.ಪಟ್ಟಣದ ಕೆ.ಪಿ.ಎಸ್. ಕಂಫರ್ಟ್ಸ್‌ನಲ್ಲಿ ತಾಲೂಕು ಕರವೇ ಸೋಮವಾರ ಏರ್ಪಡಿಸಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಹುಟ್ಟುಹಬ್ಬ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಡು ನುಡಿ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ನಮ್ಮಂತಹ ನೂರಾರು ಕನ್ನಡದ ಕಟ್ಟಾಳುಗಳನ್ನು ಬೆಳೆಸಿ ನಾಯಕರನ್ನಾಗಿ ಮಾಡಿದ ಕೀರ್ತಿ ನಾರಾಯಣಗೌಡರಿಗೆ ಸಲ್ಲುತ್ತದೆ ಎಂದರು. ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಶಾಂತ ಕುಮಾರ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕರವೇ ಉಪಾಧ್ಯಕ್ಷ ತುಳಸಿರಾಮ್ ಅವರು ಕರವೇ ರಾಜ್ಯಾಧ್ಯಕ್ಷರ 48ನೇ ವರ್ಷದ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

    
ಆದಿಶ್ರೀಗಳಿಗೆ ಆತ್ಮೀಯ ಸ್ವಾಗತ
ಅರಸೀಕೆರೆ: ಮೂಡಿಗೆರೆಯಿಂದ ಸುಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಸಾಗುವ ಮಾರ್ಗ ಮಧ್ಯೆ ಪಟ್ಟಣಕ್ಕೆ ಭೇಟಿ ನೀಡಿದ  ನಿರ್ಮ  ಲಾನಂದಾನಾಥ ಸ್ವಾಮೀಜಿಯವರನ್ನು  ಸೋಮವಾರ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಹಾಗೂ ನಾನಾ ಸಂಘ ಸಂಸ್ಥೆಗಳ ಮುಖಂಡರು  ಭೇಟಿ ಮಾಡಿ ಆಶೀರ್ವಾದ ಪಡೆದರು. ತಾಲೂಕು ಒಕ್ಕಲಿಗ ಸಮಾಜದ ಮುಖಂಡರು ಹಾಗೂ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಅಧ್ಯಾಪಕ ವೃಂದದವರು ಸ್ವಾಮೀಜಿ ಅವರನ್ನು ಫಲಪುಷ್ಪ ನೀಡುವುದರೊಂದಿಗೆ ಬರಮಾಡಿಕೊಂಡು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಹಾಸನದ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಇದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಜಿ.ನಿರಂಜನ್ ತಾಲೂಕು  ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ.ಆರ್.ರಮೇಶ್, ಆ ಮುಖ್ಯ ಶಿಕ್ಷಕಿ ಜ್ಞಾನೇಶ್ವರಿ ್ಲ ಸ್ವಾಮೀಜಿಯವರ ಆಶಿರ್ವಾದ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.