ಹಾಸನ

ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

Published On :

ಹಾಸನ: ರೈತರ ಸಮಸ್ಯೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತರ ವಿವಿಧ ಬೆಳೆಗಳು ನಾಶವಾಗುತ್ತಿದ್ದು, ಬೆಳೆದ ಬೆಳೆಗಳಿಗೆ  ಬೆಲೆ ಇಲ್ಲದೆ ಸಂಕಷ್ಟದ ಪರಿಸ್ಥಿತಿಯಲ್ಲಿ ರೈತನು ವಿಷ ಕುಡಿದು ಸಾವನಪ್ಪುತ್ತಿದ್ದಾನೆ. ಇದಕ್ಕೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳೇ ಕಾರಣರಾಗಿದ್ದಾರೆ ಎಂದು  ದೂರಿದರು. ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ರೈತ ಸಮ್ಮೇಳನದಲ್ಲಿ ಪಾಲ್ಗೊಂಡ ರೈತರು ಮಧ್ಯಾಹ್ನ ಮೆರವಣಿಗೆ ಹೊರಟು ಬಿ.ಎಂ. ರಸ್ತೆ ಮೂಲಕ ಡಿಸಿ ಕಚೇರಿ ಬಳಿ ಬಂದು ಧರಣಿ ನಡೆಸಿದರು.
ಸಂಘಟಿದ ಹೋರಾಟ: ರೈತರಲ್ಲಿ ಒಗ್ಗಟ್ಟು ಮೂಡಿಸಿ ಸರ್ಕಾರದಿಂದ ಲಭ್ಯವಾಗುವ ಸವಲತ್ತು ಪಡೆದು, ತೋಟಗಾರಿಕೆ ಕೃಷಿ, ವಿದ್ಯುತ್, ಅರಣ್ಯ, ಕಂದಾಯ ಇಲಾಖೆಯಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟಕ್ಕೆ ಪ್ರೇರಣೆ ನೀಡುವುದು ನಮ್ಮ ಗುರಿ. ರೈತರು ಕೃಷಿಗೆ ಹೆಚ್ಚು ಒತ್ತು ನೀಡಿ ಕಡಿಮೆ ವೆಚ್ಚದಲ್ಲಿ ರಾಸಾಯನಿಕ ಬಳಸಿ ಉತ್ತಮಫಸಲು ಪಡೆದು ಆರೋಗ್ಯ ಕಾಪಾಡುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.