ಪಠ್ಯದಲ್ಲಿ ಪರಿಸರ ವಿಷಯ ಕಡ್ಡಾಯವಾಗಲಿ
ಬೇಲೂರು: ಮನುಷ್ಯ ತನ್ನ ಸ್ವಾರ್ಥಕ್ಕಾಗಿ ದಿನ-ನಿತ್ಯ ಅಪರೂಪವಾದ ಪ್ರಕೃತಿಯನ್ನು ನಾಶಗೊಳಿಸುತ್ತಿದ್ದು, ಮುಂದಿನ ದಿನದಲ್ಲಿ ಪ್ರಕೃತಿ ನಮ್ಮನ್ನು ನಾಶ ಮಾಡುವ ದಿನ ಹತ್ತಿರವಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾ. ಈ. ರಾಜೀವ್ ಗೌಡ ತಿಳಿಸಿದರು.
ಪಟ್ಟಣದ ನೆಹರು ನಗರದ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ನಡೆದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾರ್ಥ ಮಿತಿ ಮೀರಿದ ಹಂತಕ್ಕೆ ತಲಿಪಿದ್ದು, ಕಾಡು-ಮೇಡುಗಳು, ಪ್ರಾಣಿ ಪಕ್ಷಿಗಳನ್ನು ಪುಸ್ತಕದಲ್ಲಿ ವೀಕ್ಷಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಜನರು ಪರಿಸರದ ಬಗ್ಗೆ ಕನಿಷ್ಟ ಜಾಗೃತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಇಂದಿನ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಅಯಾ ಶಾಲಾ-ಕಾಲೇಜು ಮಾಡಬೇಕು ಎಂಬ ಕಠಿಣ ನಿಮಯ ಪಾಲನೆಯನ್ನು ಸರ್ಕಾರ ತರಬೇಕು ಎಂದು ಸಲಹೆ ನೀಡಿದ ಅವರು, ಪ್ರತಿಯೊಂದು ಪಠ್ಯದಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ವಿಷಯ ಇರಬೇಕು ಎಂದು ಅಭಿಪ್ರಾಯಪಟ್ಟರು. ವೃತ್ತ್ತ ನಿರೀಕ್ಷ ಕೆ.ಎಲ್.ಗಣೇಶ್ ಮಾತನಾಡಿದರು. ಕಿರಿಯ ಶ್ರೇಣಿ ನ್ಯಾ. ವೆಂಕಟೇಶ್ ನಾಯಕ್, ವಕೀಲರ ಸಂಘದ ಲಿಂಗೇಶ್, ಪಿಎಸ್ಐ ಆಶ್ವಿನ್ ಕುಮಾರ್, ಗ್ರೀನ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್, ನಾಗರಾಜು, ವಕೀಲರ ಸಂಘದ ಉಪಾಧ್ಯಕ್ಷ ರಾಜೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

