ಪರಿಸರ ಸಂರಕ್ಷಣೆಗೆ ಅರಣ್ಯ ಇಲಾಖೆ ಸ್ಪಂದಿಸುತ್ತಿಲ್ಲ: ಆರೋಪ
ಬೇಲೂರು: ಅಭಿವೃದ್ಧಿ ಶೀಲ ದೇಶವಾಗಿರುವ ಭಾರತದಲ್ಲಿ ಪರಿಸರ ಸಂರಕ್ಷಣೆಯಲ್ಲಿ ಹಿಂದೆ ಬಿದ್ದಿದ್ದೇವೆ ಎಂದು ಬಿಜಿಎಸ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಹೇಳಿದರು.
ಬೇಲೂರು ಸಮೀಪದ ಆಧಿಚುಂಚನಗಿರಿ ಶಿಕ್ಷಣ ಟ್ರಷ್ಟನ ಬಿ.ಜಿ.ಎಸ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿ.ಜಿ.ಎಸ್ ಇಕೊ ಕ್ಲಬ್ ವತಿಯಿಂದ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಮ್ಮ ಕ್ಲಬ್ ವತಿಯಿಂದ ಪರಿಸರ ಜಾಗೃತಿ ಮೂಡಿಸುವ ಬಗ್ಗೆ ವರ್ಷದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ ಎಂದು ಹೇಳಿದರು.
ಪರಿಸರ ರಕ್ಷಿಸಿ: ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆ, ಪರಿಸರ ಮಾಲೀನ್ಯ, ಪರಿಸರ ಜಾಗೃತಿಯ ಬಗ್ಗೆ ತಾಲೂಕಿನ ವಿಧ್ಯಾರ್ಥಿಗಳಿಗೆ ಪ್ರಬಂದ ಮತ್ತು ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸುತ್ತೇವೆ. ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಪರಿಸರ ದಿನಾಚರಣೆಯನ್ನು ಕೇವಲ ಒಂದು ದಿವಸ ಆಚರಿಸಿದರೆ ಸಾಲದು ಇದನ್ನು ವರ್ಷ ಪೂರ್ತಿ ಆಚರಿಸಬೇಕು, ಈ ಆಚರಣೆಯೂ ನಾಮಕಾವಸ್ಥೆಗೆ ಹಾಗಬಾರದು, ಪರಿಸರ ಸಂರಕ್ಷಣೆ ಹಾಗೂ ಜಾಗೃತಿಯ ವಿಷಯದಲ್ಲಿ ಅರಣ್ಯ ಇಲಾಖೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಿಳಿಸಿದರು.
ಪರಿಸರ ಜಾಗೃತಿ: ಉಪನ್ಯಾಸಕ ದುಮ್ಮೇಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುರಳಿ ಮತ್ತು ಹೇಮ ಪರಿಸರದ ಬಗ್ಗೆ ಮಾತನಾಡಿದರು. ಸುನಿಲ್. ಆದಿತ್ಯ, ಕಾಲೇಜಿನ ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

