ಶುಶ್ರೂಷಕಿಯರಿಗೆ ತಾಳ್ಮೆ ಅಗತ್ಯ'
ಚನ್ನರಾಯಪಟ್ಟಣ: ವೈದ್ಯೋ ಹರಿ ನಾರಾಯಣ ಎಂಬಂತೆ ವೈದ್ಯರಿಗೆ ಪ್ರಾಮುಖ್ಯತೆ ನೀಡುವಂತೆ ಶುಶ್ರೂಷಕಿಯರಿಗೂ ಅಷ್ಟೇ ಪ್ರಾಮುಖ್ಯತೆ ನೀಡ ಬೇಕು, ಖಾಸಗಿ ಆಸ್ಪತ್ರೆ ಮತ್ತು ಸರ್ಕಾರಿ ಆಸ್ಪತ್ರೆಗೆ ಕೆಲಸ ಮಾಡಲು ತೆರಳಿದಾಗ ಅಲ್ಲಿಗೆ ಬರುವಂತಹ ರೋಗಿಗಳನ್ನು ಸೇವಾ ಮನೋಭಾವದಿಂದ ನೋಡಿ ಅವರೊಂದಿಗೆ ತಾಳ್ಮೆಯಿಂದ ವರ್ತಿಸುವಂತೆ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಾಸಕ ಸಿ.ಎನ್. ಬಾಲಕೃಷ್ಣ ಸಲಹೆ ನೀಡಿದರು.
ಪಟ್ಟಣದಲ್ಲಿ ಇತ್ತೀಚೆಗೆ ನಡೆದ ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ದಶಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಹಿಂದೆ ಹೊರ ರಾಜ್ಯಗಳಾದ 80 ರಿಂದ 90 ರಷ್ಟು ವಿದ್ಯಾರ್ಥಿಗಳು ನರ್ಸಿಂಗ್ ತರಬೇತಿಗೆ ಬರುತ್ತಿದ್ದರು. ನರ್ಸಿಂಗ್ ತರಬೇತಿ ಪಡೆದ ಹಲವಾರು ವಿದ್ಯಾರ್ಥಿಗಳು ವಿದೇಶಗಳಲ್ಲಿಯೂ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.
ಗ್ರಾಮೀಣರು ಹಿಂದೆ: ಆದರೆ ನರ್ಸಿಂಗ್ ತರಬೇತಿ ಪಡೆಯುವಲ್ಲಿ ಗ್ರಾಮೀಣ ಪ್ರದೇಶದ ಯುವಕ, ಯುವತಿಯರು ಹಿಂದೆ ಬೀಳುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಬಿ.ಎಲ್. ಅರುಣ್ ಕುಮಾರ್ ಸ್ವಾಗತಿಸಿದರು, ಚೇತನ್ ವಂದಿಸಿದರು. ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಪ್ರತಿಜ್ಞಾ ವಿಧಿ ಸ್ವೀಕಾರವನ್ನು ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ ಕೆ.ಜಿ.ವಿಜಯ್ ಕುಮಾರ್ ನಡೆಸಿಕೊಟ್ಟರು. ಮೈಸೂರಿನ ವೈದ್ಯ ವಿಕಾಸ್ ಕಾಲೇಜಿನ ಪ್ರಾಂಶುಪಾಲ ಬಿ. ಅಮ್ಮಯ್ಯ, ಗ್ರೇಡ್ 2 ತಹಸೀಲ್ದಾರ್ ಸೊಮಶೇಖರ್, ಪ್ರಾಂಶುಪಾಲ ಬಿ.ಎಲ್. ಅರುಣ್ ಕುಮಾರ್ ಬೋಧಕ ರಾದ ದಾನನಗೌಡ, ಎಸ್. ಎಸ್. ಅರುಣ್ ಕುಮಾರ್, ಭೀಮನ್ ಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

