ಸಮುದಾಯ ಭವನಕ್ಕೆ ಶಂಕುಸ್ಥಾಪನೆ
ಸಕಲೇಶಪುರ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ದಿಗೆ ರಾಜೀವ್ ಗಾಂಧಿ ಸೇವಾ ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡ ಇರುವುದು ಅತ್ಯವಶ್ಯಕ ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು. ಸೋಮವಾರ ತಾಲೂಕಿನ ಹೆಗ್ಗದ್ದೆ ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೆಂದ್ರದ ಉದ್ಘಾಟನೆ ಹಾಗೂ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲಾ ಪಂಚಾಯತ್ಗಳಲ್ಲೂ ರಾಜೀವ್ ಗಾಂಧಿ ಸುವರ್ಣ ಗ್ರಾಮಗಳ ನಿರ್ಮಾಣಮಾಡುತ್ತಿರುವುದು ಗ್ರಾಮೀಣ ಪ್ರದೇಶಗಳ ಬೆಳವಣಿಗೆಗೆ ಸಹಾಯಕ. ಗ್ರಾಮದಲ್ಲಿ 5 ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಶಂಕುಸ್ಥಾಪನೆ ನೆರವೇರಿಸಲಾಗಿದ್ದು ಇನ್ನೂ 6 ತಿಂಗಳ ಅವಧಿಯಲ್ಲಿ ಸುಸಜ್ಜಿತ ಸಮುದಾಯ ನಿರ್ಮಾಣಗೊಳ್ಳಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಪುಷ್ಪ, ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಇತರರು ಇದ್ದರು.
ಆದಿ ಮಠದಲ್ಲಿ ವಿಶೇಷ ಉಪನ್ಯಾಸ 13ರಂದು
ಹಾಸನ: ನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಜೂ. 13 ರಂದು ಸಂಜೆ 6.30 ಕ್ಕೆ ಶ್ರೀ ಮಠದ ಆವರಣದಲ್ಲಿರುವ ನವನಾಥಯಾಗ ಮಂಟಪದಲ್ಲಿ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಡಾ. ಪಾವಗಡ ಪ್ರಕಾಶ್ ರಾವ್
ಅವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಹಾಸನದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳಾದ ಶಂಭುನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

