ಕಲ್ಬುರ್ಗಿ ವಿರುದ್ಧ ಕ್ರಮಕ್ಕೆ ಆಗ್ರಹ
ಆಲೂರು: ಎಂ.ಎಂ. ಕಲ್ಬುರ್ಗಿಯವರು ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ದಕ್ಕೆ ತಂದಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕಲ್ಲಿನ ಮೂರ್ತಿಯ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ. ಅರ್ಚಕರು ದೇವರ ಪೂಜೆ ನಿಲ್ಲಿಸಬೇಕು. ಯು.ಆರ್.ಅನಂತಮೂರ್ತಿಯವರು ಕಲ್ಲಿನ ದೇವರ ಮೇಲೆ ಮೂತ್ರ ಮಾಡಿದಂತೆ ಆಗಾಗಿ ಕಲ್ಲಿನ ವಿಗ್ರಹದ ಮೇಲೆ ಮೂತ್ರ ಮಾಡಿದರೂ ತಪ್ಪಾಗುವುದಿಲ್ಲ ಎಂದು ಮಾತನಾಡಿದ್ದಾರೆ. ಇದರಿಂದ ಹಿಂದುಗಳಿಗೆ ನೋವುಂಟಾಗಿದೆ. ಆದ್ದರಿಂದ ಕಲ್ಬುರ್ಗಿಯವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎ.ಎಚ್. ರಮೇಶ, ನಾಗರಾಜು ಹುಲ್ಲಹಳ್ಳಿ, ಹೇಮಂತ ಆಲೂರು, ಲೋಕೇಶ ಕಾಮತಿ, ಕ್ಯಾಂಟೀನ್ ನಾಗರಾಜು, ಗುಂಡಪ್ಪ ಕದಾಳು ಇದ್ದರು.
'ನೋಟಿಸ್ ಹಿಂಪಡೆಯಿರಿ'
ಹಾಸನ: ಕಳೆದ ಹದಿನೇಳು ದಿನಗಳಿಂದ ನ್ಯೂ ಮಿನರ್ವ ಮಿಲ್ ಕಾರ್ಮಿಕರು ಕೈಗೊಂಡಿರುವ ಮುಷ್ಕರಿಕ್ಕೆ ಸ್ಪಂದಿಸದ ಕಾರ್ಖಾನೆ ಆಡಳಿತ ಮಂಡಳಿ ಕಾರ್ಮಿಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಜಿಲ್ಲಾಡಳಿತದ ಮುಂದೆ ಬುಧವಾರ ಅಲವತ್ತುಕೊಂಡು ಮನವಿ ಸಲ್ಲಿಸಿದರು. ಧರಣಿ ನಡೆಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ವೇತನ ಹೆಚ್ಚಳ, ಕಾಯಂ ನೇಮಕಾತಿ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗಾಗಿ ಕಾರ್ಖಾನೆ ಮುಂದೆ ಮುಷ್ಕರ ಮಾಡುತ್ತಿದ್ದರು ಅಧಿಕಾರಿಗಳಿಗೆ ಕಾಳಜಿ ಇಲ್ಲ. ಅಲ್ಲದೆ ಕೆಲ ಕಾರ್ಮಿಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರತಿಭಟನಕಾರರು ನೋಟಿಸ್ ಜಾರಿ ಮಾಡಿದ 48 ತಾಸಿನೊಳಗೆ ಮುಷ್ಕರ ಕೈ ಬಿಡದಿದ್ದರೇ ಶಿಸ್ತುಕ್ರಮ ಜರುಗಿಸುವುದಾಗಿ ಸೂಚನ ಫಲಕದಲ್ಲಿ ಆಡಳಿತ ವ್ಯವಸ್ಥಾಪಕರು ತಿಳಿಸಿದ್ದಾರೆ ಎಂದು ದೂರಿದರು. ತಕ್ಷಣ ಕಾರ್ಮಿಕರ ನಾನಾ ಬೇಡಿಕೆಯನ್ನು ಈಡೇರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಮಧು, ರಂಗಸ್ವಾಮಿ, ರಂಗಸ್ವಾಮಿ, ಸಂತೋಷ, ಮಂಜು ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

