ಕ್ಷೇಮಾಭಿವೃದ್ಧಿ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ 25ರಂದು
ಅರಸೀಕೆರೆ: ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ದಿ ಕಾಯ್ದೆಯನ್ನು ಜಾರಿಗೊಳಿಸದೆ ನಿರ್ಲಕ್ಷ್ಯ ತೋರುತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವಿರುದ್ಧ ಜೂ. 25 ರಂದು ಹೋರಾಟ ನಡೆಸಲು ರಾಜ್ಯ ದಿನಗೂಲಿ ನೌಕರರ ಮಹಾಮಂಡಲ ತೀರ್ಮಾನಿಸಿದೆ ಎಂದು ತಾಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷೆ ಗೀತಾ ನಾರಾಯಣಸ್ವಾಮಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲದ ಅಧ್ಯಕ್ಷರಾದ ಡಾ.ಕೆ.ಎಸ್. ಶರ್ಮಾ ನೇತೃತ್ವದ ತಂಡವು ಮಾನ್ಯ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿಪತ್ರವನ್ನು ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಜೂ. 16 ರ ಒಳಗೆ ಈಡೇರಿಸುವಂತೆ ಈಗಾಗಲೇ ಒತ್ತಾಯಿಸಲಾಗಿದೆ.
ಶಾಸಕ, ಸಚಿವರಿಗೆ ಮನವಿ: ಜೂ. 16 ರೊಳಗೆ ಸರ್ಕಾರ ಯಾವುದೇ ನಿರ್ಧಾರವನ್ನು ಪ್ರಕಟಿಸದೇ ಹೋದಲ್ಲಿ ಮಹಾಮಂಡಲದ ಅಧ್ಯಕ್ಷರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಮನವಿ ಪತ್ರವನ್ನು ಜೂ. 25 ರಂದು ಸಲ್ಲಿಸಲು ಆಯಾ ಜಿಲ್ಲೆಗಳ ಡಿಸಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಬೇಡಿಕೆಗಳು: ಸರ್ಕಾರಿ ಇಲಾಖೆಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ದಿನಗೂಲಿ ನೌಕರರ ಹೆಸರುಗಳನ್ನು ತಕ್ಷಣ ಅಧಿಸೂಚಿಸಬೇಕು. 15-2-2013 ರಿಂದಲೇ ಈ ಎಲ್ಲಾ ಆರ್ಹ ದಿನಗೂಲಿ ನೌಕರರಿಗೂ ಹೊಸ ವೇತನದ ಆಧಾರದ ಮೇಲೆ ಬಾಕಿ ವೇತನವನ್ನು ತಕ್ಷಣವೇ ವಿತರಣೆಗೆ ಆದೇಶ ಸೇರಿದಂತೆ ಇತರ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

