ಹಾಸನ

ಮಹಿಳಾ ಅಪಹರಣ ತಡೆಯಲು ಆಗ್ರಹ

Published On :

ಹಾಸನ: ಕಾಣಿಯಾಗಿರುವ ಮಹಿಳೆಯರನ್ನು ಪತ್ತೆ ಹಚ್ಚಿ, ಮಹಿಳೆಯರ ಅಪಹರಣ ತಡೆಗಟ್ಟುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್. ವೃತ್ತ, ಬಿ.ಎಂ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ರಾಜ್ಯದಲ್ಲಿ ಯುವತಿಯರು ಮತ್ತು ಮಹಿಳೆಯರು ಕಾಣೆಯಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಹಲವು ದೂರುಗಳನ್ನು ದಾಖಲಿಸಿದ್ದರು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಇದರಿಂದ ಮಹಿಳೆಯರ ಕಾಣೆಯಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದರಿಂದ ಹೆಣ್ಣು ಮಕ್ಕಳು ರಸ್ತೆಗಳಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಭಯ ಪಡುವಂತಾಗಿದೆ ಎಂದರು.
ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ (ಎನ್‌ಸಿಆರ್ಬಿ) ಪ್ರಕಾರ ರಾಜ್ಯದಲ್ಲಿ ಅತೀ ಹೆಚ್ಚು ಮಹಿಳೆಯರು ಕಾಣೆಯಾಗಿದ್ದರ ಬಗ್ಗೆ ವರದಿಯಾಗಿದೆ. ಇದರಿಂದ ಹೆಣ್ಣು ಮಕ್ಕಳ ಮಾರಾಟ ಜಾಲವಿರುವುದು ಖಚಿತವಾಗಿದೆ. ಪ್ರತಿನಿತ್ಯ ರಾಜ್ಯದಲ್ಲಿ 15ರಿಂದ 22 ಯುವತಿಯರು ಕಾಣಿಯಾಗುತ್ತಿದ್ದಾರೆ. ಮಹಿಳೆಯರು ಕಾಣೆಯಾಗಿರುವ ಬಗ್ಗೆ ಸ್ವತಃ ಗೃಹ ಸಚಿವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಇಡೀ ದಕ್ಷಿಣ ಭಾರತದಲ್ಲಿ ಮಹಿಳೆಯರ ಅಪಹರಣದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನ ಪಡೆದಿರುವುದು ರಾಜ್ಯದ ಜನತೆ ತಲೆ ತಗ್ಗಿಸುವಂತಹ ವಿಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಆದ್ದರಿಂದ ಕೂಡಲೇ ಸಂಬಂಧಪಟ್ಟವರು ಕಾಣೆಯಾಗಿರುವ ಮಹಿಳೆಯನ್ನು ಪತ್ತೆ ಹಚ್ಚಿ, ಮಹಿಳೆಯರ ಅಪಹರಣವನ್ನು ತಡೆಗಟ್ಟಬೇಕು ಇಲ್ಲವಾದಲ್ಲಿ ಈ ವಿರುದ್ಧ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುಶೀಲ ಅಣ್ಣಪ್ಪ, ಶೇಶಮ್ಮ, ಅನ್ನಪೂರ್ಣ, ಭಾಗ್ಯಮ್ಮ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.