ಮಕ್ಕಳನ್ನು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ
ಅರಸೀಕೆರೆ: ವಿದ್ಯೆಯಿಂದ ವಂಚಿತರಾಗುವುದರಿಂದ ಮಕ್ಕಳಲ್ಲಿ ಕೀಳರಿಮೆ ಬೆಳೆಯಲು ಕಾರಣವಾಗುತ್ತದೆ. ವಿದ್ಯಾಭ್ಯಾಸ ಮಾಡುವುದರಿಂದ ಸಾಮಾನ್ಯ ಜ್ಞಾನ ಬೆಳೆಯಲು ಸಾಧ್ಯ. ಯಾವುದೇ ಕಾರಣಕ್ಕೂ 14 ವರ್ಷದ ಒಳಗಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಿ ಬಾಲ ಕಾರ್ಮಿಕರಾಗಲು ಬಿಡದೆ ನೋಡಿಕೊಳ್ಳುವ ಜವಾಬ್ದಾರಿ ಪೋಷಕರು, ಶಿಕ್ಷಕರು ಹಾಗೂ ಸರ್ಕಾರದ ಮೇಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಈ. ಚಂದ್ರಕಲಾ ನುಡಿದರು.
ತಾಲೂಕು ಕಾನೂನು ಸೇವಾಸಮಿತಿ ವಕೀಲರ ಸಂಘ ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಗೌರಮ್ಮ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕರಾಗಲು ಬಡತನ ಪರಿಸರ, ಪೋಷಕರ ದುಶ್ಚಟಗಳು ಕಾರಣವಾಗುತ್ತದೆ. 14 ವರ್ಷದೊಳಗಿನ ಮಕ್ಕಳಿಗೆ ಯಾವುದು ಸರಿ ಯಾವುದು ತಪ್ಪು ಎಂಬ ಅರಿವಿರುವುದಿಲ್ಲ. ಮಕ್ಕಳಿಗೆ ವಿದ್ಯೆ ನೀಡದಿದ್ದರೆ ಮುಂದೆ ಸಮಾಜಘಾತುಕ ಶಕ್ತಿಗಳಾಗಿ ಬೆಳೆಯಲು ಕಾರಣವಾಗುತ್ತದೆ. ಬರಿ ಕಾನೂನಿಂದ ಎಲ್ಲವನ್ನು ಸರಿಪಡಿಸಲಾಗದು. ಇದಕ್ಕೆ ಜನಜಾಗೃತಿ ಮೂಡಿಸುವ ಕಾರ್ಯ ಗಬೆಕೆಂದರು.
ಅಪರ ಸಿವಿಲ್ ಜಡ್ಜ್ ಯಶವಂತಕುಮಾರ್ ಮಾತನಾಡಿ, ಮಕ್ಕಳಲ್ಲಿ ಗುರಿ ಇರಲಿ ಇರಲಿ ಕನ್ನಡ ಭಾಷಾ ಮಾಧ್ಯಮದಲ್ಲಿ ಓದುತ್ತಿದ್ದೇವೆ ಎಂಬ ಕೀಳರಿಮೆ ಬೇಡ ಎಂದು ಹೇಳಿ ಬಾಲ ಕಾರ್ಮಿಕರಾಗಿ ದುಡಿಯುವ ಮಕ್ಕಳು ಮಾನಸಿಕವಾಗಿ ದೈಹಿಕವಾಗಿ ಕುಗ್ಗುತ್ತಾರೆ. ಆದುದರಿಂದ ಬಾಲ ಕಾರ್ಮಿಕ ಪದ್ಧತಿ ಅಳಿಯ ಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಗೌರಮ್ಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಂ.ಸಿ ಮಲ್ಲಿಕಾರ್ಜುನ ಮಾತನಾಡಿ, ಪೋಷಕರಿಗೆ ತಂದೆ ತಾಯಿಗಳಿಗೆ ಎಷ್ಟೆ ತೋಂದರೆ ಇದ್ದರು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದು ಕರ್ತವ್ಯ. ಸರ್ಕಾರ ಇದಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. 1986 ಬಾಲಕಾರ್ಮಿಕ ಶಿಕ್ಷಣ ಕಾಯ್ಕೆ ಅಡಿಯಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯವಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಸರ್ವೇಶ್, ಕಾನೂನು ಸಲಹೆಗಾರ ಆರ್. ವಿಜಯಕುಮಾರ್, ಸರ್ಕಾರಿ ವಕೀಲೆ ಮಮತ, ಕಾರ್ಮಿಕ ಇಲಾಖೆ ನಿರೀಕ್ಷಕ ವಿಜಯಕುಮಾರ ಮಾತನಾಡಿ, ಬಾಲಕಾರ್ಮಿಕರ ಪಿಡುಗು ನಿರ್ಮೂಲನೆ ಶಿಕ್ಷಕರ ಪಾತ್ರದ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾಸಂಸ್ಥೆಯ ಅಧ್ಯಕ್ಷ ನರಸಿಂಹೆಗೌಡ ಕಾರ್ಯದರ್ಶಿ ಜಿ.ಎಸ್. ಶಿವಲಿಂಗಪ್ಪ ಉಪಸ್ಥಿತರಿದ್ದರು. ಶಿಕ್ಷಕ ಧನಂಜಯಕುಮಾರ್ ಸ್ವಾಗತಿಸಿದರು. ಶಿರಸ್ತೇರ್ ವೆಂಕಟರಮಣೆಗೌಡ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

