ಹಾಸನ

ಸೂಳೇಕೆರೆ ಬಳಿ ಚಿರತೆ ಅನುಮಾನಾಸ್ಪದ ಸಾವು

Published On :

ಅರಸೀಕೆರೆ: ತಾಲೂಕಿನ ಸೂಳೇಕೆರೆ ಗ್ರಾಮದ ಕೆರೆಯ ಬಳಿ ಮೃತ ಚಿರತೆಯೊಂದರ ದೇಹ ಶುಕ್ರವಾರ ಪತ್ತೆಯಾಗಿದೆ.  ಕೆರೆಯ ಏರಿಯ ಮೇಲೆ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ರೈತರು ಸ್ಥಳಕ್ಕೆ ಹೋಗಿ ನೋಡಿದಾಗ ಸುಮಾರು 6 ರಿಂದ 7 ವರ್ಷ ಪ್ರಾಯದ ಹೆಣ್ಣು ಚಿರತೆ ಅನುಮಾನಾಸ್ಪದ ರೀತಿಯಲ್ಲಿ ಸತ್ತಿರುವುದು ಕಂಡು ಬಂದಿತು.
 ಈ ಬಗ್ಗೆ ಸ್ಥಳೀಯ ಗ್ರಾಮಸ್ಥರು ದೂರವಾಣಿ ಮೂಲಕ ತಮಗೆ ವಿಷಯ ತಿಳಿಸಿದರು ಎಂದು ಅರಣ್ಯ ವಲಯಾಧಿಕಾರಿ ಜೆ.ಬಿ. ರವಿ ತಿಳಿಸಿದ್ದಾರೆ.  ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿ ಸ್ಥಳದ ಮಹಜರು ಮಾಡಿಕೊಂಡು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.  ಇದು ಮೇಲ್ನೊಟಕ್ಕೆ ಸಹಜ ಸಾವು ಎಂದು ಕಂಡು ಬಂದರೂ ನಿರ್ದಿಷ್ಟ ಕಾರಣ ಇನ್ನೂ ಗೊತ್ತಾಗಿಲ್ಲ. ತಾಲೂಕಿನ ಅಗ್ಗುಂದ ಗ್ರಾಮದ ಪಶುವೈದ್ಯಾಧಿಕಾರಿ ಡಾ. ಹನುಮಂತಪ್ಪ ಅವರು ಮೃತ ಚಿರತೆಯ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿದರು. ಬಳಿಕ ಮೃತ್ತ ದೇಹವನ್ನು ಅಂತ್ಯ ಸಂಸ್ಕಾರವನ್ನು ಅರಣ್ಯ ಇಲಾಖೆ ಸಿಬ್ಬಂದಿ ನೆರವೇರಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.