ಹಾಸನ

ಕಾಫಿ ಕಾಂಡ ಕೊರಕ ಹತೋಟಿಗೆ ನೂತನ ಪ್ರಯೋಗಗಳು

Published On :

ಹಾಸನ: ಅರೇಬಿಕಾ ತಳಿ ಕಾಫಿಯನ್ನು ವಿಪರೀತವಾಗಿ ಕಾಡುತ್ತಿರುವ  ಬಿಳಿಕಾಂಡ ಕೊರಕದ ಹತೋಟಿಗಾಗಿ ನಾನಾ ನೂತನ  ಪ್ರಯೋಗಗಳನ್ನು ಇತ್ತೀಚೆಗೆ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ  ಹಮ್ಮಿಕೊಳ್ಳಲಾಗಿತ್ತು.
ಸುಮಾರು 200 ವರ್ಷಗಳಿಂದ ಅರೇಬಿಕಾ ಕಾಫಿಯಲ್ಲಿ ಬಿಳಿ ಕಾಂಡ ಕೊರಕದ ಸಮಸ್ಯೆಯಿದ್ದು, ಇದರ ಶಾಶ್ವತ ಪರಿಹಾರಕ್ಕಾಗಿ ಸಾಕಷ್ಟು ಪ್ರಯತ್ನಗಳಾಗುತ್ತಿವೆ. ಈ ದಿಸೆಯಲ್ಲಿ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ಹಾಗೂ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಒತ್ತು ನೀಡಿ ಕೆಲವು ಪರಿಹಾರಗಳನ್ನು ಸೂಚಿಸಿದ್ದಾರೆ ಎಂದು ಬಾಳೆಹೊನ್ನೂರು ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಸಂಶೋಧನಾ ಸಹಾಯಕ  ಮಂಜುನಾಥ ರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಇಡಿಇ ಕನ್ಸಲ್ಟಿಂಗ್‌ನ ಮುಖ್ಯಸ್ಥ  ಬಿ. ಗಿರೀಶ್, ಮಾಸ್ ಕಾಫಿ ಉತ್ಪಾದಕರ ಕಂಪೆನಿಯ ಅಧ್ಯಕ್ಷ ಎಚ್.ಎಂ. ಲೋಕೇಶ್, ಕೃಷಿಕರಾದ  ಹೆದ್ದುರ್ಗ ಮೋಹನ್, ಸಂಗಮೇಶ್, ತೇಜೇಶ್ ಮಣಸುಮಕ್ಕಿ, ಭೂಮಿ ಸಂಸ್ಥೆಯ ಪುಟ್ಟಸ್ವಾಮಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.