ಹಾಸನ

ಮೇಲ್ಸೇತುವೆ ನಿರ್ಮಿಸಲು ಆಗ್ರಹಿಸಿ ರಸ್ತೆ ತಡೆ

Published On :

ಕ.ಪ್ರ. ವಾರ್ತೆ ಟಿ ಹಾಸನ ಟಿ ಜೂ. 14
ಹಾಸನ ನಗರದ ರೇಲ್ವೆ ಗೇಟ್ ಸಮೀಪ ಮೇಲ್ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಶನಿವಾರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ನಗರದ ಎನ್.ಆರ್. ವೃತ್ತದಿಂದ ಹೈಟೆಕ್ ಬಸ್ಸು ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಹಾದು ಹೋಗಿರುವ ರೇಲ್ವೆ ಗೇಟ್ ಮುಂದೆ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಸಾರ್ವಜನಿಕರಿಗೆ ತೊಂದರೆ: ನಗರದ ಹೊಳೆನರಸೀಪುರ ರಸ್ತೆಯಲ್ಲಿ ಕಳೆದ ನಾಲ್ಕುವರ್ಷಗಳ ಹಿಂದೆ ಹೈಟೆಕ್ ಬಸ್ಸು ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಇದರಿಂದ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಾರ್ಗ ಮಧ್ಯದಲ್ಲಿ ರೇಲ್ವೆ ಹಳಿ ಹಾದು ಹೋಗಿರುವುದರಿಂದ ದಿನದಲ್ಲಿ ಸುಮಾರು 10ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿವೆ. ರೈಲು ಓಡಾಡುವ ಸಂದರ್ಭದಲ್ಲಿ ಕನಿಷ್ಠ 20ರಿಂದ 30 ನಿಮಿಷಗಳ ಕಾಲ ರೇಲ್ವೆ ಗೇಟ್ ಹಾಕಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೀರಾ ತೊಂದರೆ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.
ಇದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜಿಗೆ, ಸರ್ಕಾರಿ ನೌಕರರ ತಮ್ಮ ಕೆಲಸಕ್ಕೆ ತೆರಳಲು ತೊಂದರೆಯಾಗುತ್ತಿದೆ. ನಗರದಿಂದ ಹೊರಕ್ಕೆ ಹೋಗಬೇಕಾದರೆ ಈ ಮಾರ್ಗವನ್ನೇ ಜನರು ಹೆಚ್ಚಾಗಿ ಆವಲಂಬಿಸಿರುವುದರಿಂದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ರೈಲ್ವೆ ಗೇಟ್ ಬಂದ್ ಮಾಡಿದರೆ ವಾಹನಗಳು ಎನ್.ಆರ್.ವೃತ್ತದವರೆಗೂ ನಿಲ್ಲಲಿವೆ. ಇದರಿಂದ ಎನ್.ಆರ್.ವೃತ್ತದಲ್ಲಿಯೂ ಸಹ ವಾಹನ ಸಂಚಾರಕ್ಕೆ ಅಚರಣೆ ಉಂಟಾಗುತ್ತಿದೆ ಎಂದು ಆರೋಪಿಸಿದರು.
ಹೋರಾಟದ ಎಚ್ಚರಿಕೆ: ಕೂಡಲೇ ಸಂಬಂಧಪಟ್ಟವರು ಮೇಲ್ಸೇತುವೆ ನಿರ್ಮಿಸಿಬೇಕು ಹಾಗೂ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾವಲು ಪಡೆ ಜಿಲ್ಲಾಧ್ಯಕ್ಷ ಬಿ.ಎಸ್.ನವೀನ್ ಕುಮಾರ್, ತಾಲೂಕು ಅಧ್ಯಕ್ಷ ಭಾನುಪ್ರಕಾಶ್, ಸಂಘಟನಾ ಕಾರ್ಯದರ್ಶಿ ಸೈಯದ್ ಏಜಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜೇಗೌಡ, ನವೀನ್, ಪ್ರಸಾದ್, ಮಂಜುನಾಥ್ ಹಾಗೂ ಇತರರು ಇದ್ದರು.



ಬೇಡಿಕೆಗಳು

ನಗರದ ಎನ್.ಆರ್.ವೃತ್ತದಿಂದ ಹೈಟೆಕ್ ಬಸ್ಸು ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ  ಮೇಲ್ಸೇತುವೆ ನಿರ್ಮಿಸಬೇಕು.
ಎನ್.ಆರ್.ರಸ್ತೆಯಿಂದ ಹೈಟೆಕ್ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯನ್ನು ಅಗಲೀಕರಣ ಮಾಡಬೇಕು.
ಈ ರಸ್ತೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.