ಹಾಸನ

ಆಳುವ ಜನರಲ್ಲಿ ಕನ್ನಡಾಭಿಮಾನವಿಲ್ಲ

Published On :

ಹಾಸನ: ಆಳುವ ಜನರಲ್ಲಿ ಕನ್ನಡದ ಬಗ್ಗೆ ಅಭಿಮಾನವಿಲ್ಲದ ಕಾರಣ ಕನ್ನಡಕ್ಕೆ ಕುತ್ತು ಬಂದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಬಿ.ಎಲ್. ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭಾನುವಾರ ನಡೆದ ಕರ್ನಾಟಕ ವೀರಕನ್ನಡಿಗರ ಸೇನೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ರಾಜಕಾರಣಿಗಳ ಇಚ್ಚಾಶಕ್ತಿ ಕೊರತೆಯಿಂದ ಕನ್ನಡ ಭಾಷೆ ಸೊರಗುತ್ತಿದೆ. ಮಂತ್ರಿಯಾದವರೇ ಕನ್ನಡಕ್ಕೆ ಕುತ್ತು ಬರುವ ಮಾತುಗಳನ್ನು ಬಹಿರಂಗವಾಗಿ ಹೇಳುತ್ತಿದ್ದಾರೆ. ಜನ ಪ್ರತಿನಿಧಿಗಳ ಸ್ವಾರ್ಥದಿಂದ ರಾಜ್ಯದ ಪ್ರಗತಿ ಕುಂಠಿತವಾಗುತ್ತಿದೆ ಎಂದರು. ನ್ಯಾಯಾಲಯ ಕನ್ನಡ ಭಾಷೆ ವಿರುದ್ಧ ತೀರ್ಪು ನೀಡಿದೆ. ಸಂವಿಧಾನಕ್ಕೆ ಅನುಗುಣವಾಗಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಿ. ಮೂಲಭೂತವಾಗಿ ತಿದ್ದುಪಡಿ ಆಗಬೇಕಾಗಿದೆ ಎಂದು ಒತ್ತಾಯಿಸಿದರು. ಕರ್ನಾಟಕ ವೀರಕನ್ನಡಿಗರ ಸೇನೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಗಣ್ಯರನ್ನು ಸನ್ಮಾನಿಸಲಾಯಿತು. ಕೆ.ಟಿ. ರವೀಂದ್ರಕುಮಾರ್, ಸದ್ಗೂರು ನಾಗಭೂಷಣ್, ಮುಸ್ಲಿಂ ಧರ್ಮಗುರು ಅಮೀರ್ ಜಾನ್, ಮಂಜೇಗೌಡ,  ಆರೀಫ್ ಅಹಮದ್ ಇದ್ದರು.

ಎಲ್ಲರಿಗೂ ಬಾಲಕಾರ್ಮಿಕ ಕಾಯ್ದೆ ಅರಿವು ಮೂಡಿಸಿ
ಹಾಸನ:  ಬಾಲ ನ್ಯಾಯ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರೆ ಮಕ್ಕಳಿಗೆ ನ್ಯಾಯ ಸಿಗುವುದು ಖಚಿತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್. ಟಿ. ದೇವರಾಜ್ ಹೇಳಿದರು.  ಚನ್ನರಾಯಪಟ್ಟಣದ ಮೇಗಲಕೇರಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಬಾಲ ನ್ಯಾಯ ಕಾಯ್ದೆ ಬಗ್ಗೆ ಶಿಕ್ಷಕ, ಪೊಲೀಸ್, ಅಧಿಕಾರಿಗಳು, ಸ್ವಯಂ ಸೇವಾ ಸಂಘಗಳಿಗೆ ಚುನಾಯಿತ ಜನಪ್ರತಿನಿಧಿಗಳಿಗೆ ಅರಿವು ಬೇಕಾಗಿದೆ ಎಂದರು.
ಗ್ರಾಮೀಣ ಮಕ್ಕಳೇ ಹೆಚ್ಚು: ದೇಶದಲ್ಲಿ 170 ಲಕ್ಷ ಮಕ್ಕಳು ದುಡಿಮೆಯಲ್ಲಿದ್ದಾರೆ. ಗ್ರಾಮೀಣ ಮಕ್ಕಳೇ ಹೆಚ್ಚಾಗಿದ್ದು, ಕೃಷಿ, ಮನೆಗೆಲಸದಲ್ಲಿದ್ದಾರೆ ಎಂದು ವಕೀಲರ ಸಂಘದ ಅಧ್ಯಕ್ಷ ವೈ.ಕೆ.ಪುಟ್ಟಸ್ವಾಮೀಗೌಡ ಮಾತನಾಡಿದರು.  ಕಾರ್ಮಿಕ ನಿರೀಕ್ಷಕ ಪ್ರಭಾಕರ ವಿಶೇಷ ಉಪನ್ಯಾಸ ನೀಡಿ, ಶೋಷಣೆಗೊಳಗಾದ ಮಕ್ಕಳ ಪೋಷಣೆ ಮತ್ತು ರಕ್ಷಣೆ ಅಗತ್ಯವಿದೆ. ಬೀದಿ ಮಕ್ಕಳು, ಅನಾಥ ಮಕ್ಕಳು, ಕಾಣೆಯಾದ ಮಕ್ಕಳು, ಸಂಕಷ್ಟದಲ್ಲಿ ಇರುವವರಿಗೆ ನೆರವು ಮತ್ತು ಸೌಲಭ್ಯ ಅಗತ್ಯವಿದೆ ಎಂದರು.  ಪ್ರಧಾನ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಬಿ.ಹೊಸಮನಿ, ಮುಖ್ಯ ಶಿಕ್ಷಕ ಸಿದ್ದಲಿಂಗಪ್ಪ, ವಕೀಲರ ಸಂಘದ ಕಾರ್ಯದರ್ಶಿ ನಿಂಗರಾಜು, ಭಗವಾನ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.