ವಂಚನೆ ಆರೋಪ: ಇನ್ಪ್ರೋಕಾನ್ ಸಂಸ್ಥೆ ವಿರುದ್ಧ ಪ್ರತಿಭಟನೆ
ಹಾಸನ: ಹಿಂದುಸ್ತಾನ್ ಇನ್ಪ್ರೋಕಾನ್ ಸಂಸ್ಥೆಯು ಗ್ರಾಹಕರಿಂದ ಹಣವನ್ನು ಪಡೆದು, ಈಗ ಗ್ರಾಹಕರಿಗೆ ಹಣ ಹಿಂದಿರುಗಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಗ್ರಾಹಕರು ಸೋಮವಾರ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ಕಾವಲು ಪಡೆಯ ನೇತೃತ್ವದಲ್ಲಿ ಪ್ರತಿಭಟನೆ ಮುಂದಾದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಮೀಪವಿರುವ ಈ ಸಂಸ್ಥೆಯು ಏಜೆಂಟರ ಮೂಲಕ ಹಣ ಕಟ್ಟಿಸಿಕೊಂಡು ಈಗ ಅವಧಿ ಮುಗಿದರೂ ಗ್ರಾಹಕರಿಗೆ ಹಣ ಹಿಂದಿರುಗಿಸದೇ ವಿಳಂಬ ಮಾಡುತ್ತಿದ್ದಾರೆ. ಗ್ರಾಹಕರಿಗೆ ನೀಡಬೇಕಾದ ಹಣಕ್ಕೆ ಕೆಲವರಿಗೆ ಚೆಕ್ ನೀಡಿದ್ದರು. ಬ್ಯಾಂಕಿಗೆ ಹೋದರೇ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಕಂಪನಿಗೆ ಬಂದು ವಿಚಾರಿಸಿದಾಗ ಬೇರೆ ಚೆಕ್ ನೀಡುವುದಾಗಿ ಹೇಳುತ್ತಿದ್ದಾರೆ. ಹಾಗಾಗಿ ಕಳೆದ 6-7 ತಿಂಗಳು ಹಣ ನೀಡದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ಮಾಡಿದಾಗ ಸಂಜೆ ವೇಳೆಗೆ ಹಣ ನೀಡುವ ಭರವಸೆ ನೀಡಿದರು. ಗ್ರಾಹಕರು ಸಂಜೆ ಹಿಂದೂಸ್ತಾನ್ ಇನ್ಪ್ರೋಕಾನ್ ಕಚೇರಿಗೆ ಬಂದು ಕೇಳಿದರೆ ನಾಳೆ ಬನ್ನಿ ಎಂಬ ಉತ್ತರ ನೀಡುತ್ತಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಕಂಪನಿ ಮ್ಯಾನೇಜರನ್ನು ತರಾಟೆಗೆ ತೆಗೆದುಕೊಂಡರು. ನಂತರ ಕಂಪನಿಯ ಬಾಗಿಲು ಹಾಕಿಸಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾವಲು ಪಡೆ ಕಾರ್ಯಕರು ಹಾಗೂ ಕಂಪನಿಯ ನಡುವೆ ಮಾತಿನ ಚಕಮಕಿ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

