ಬಾಲಕಾರ್ಮಿಕ ಕಾಯ್ದೆ ಅರಿವು ಮೂಡಿಸಿ
ಹಾಸನ: ಬಾಲ ನ್ಯಾಯ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರೆ ಮಕ್ಕಳಿಗೆ ನ್ಯಾಯ ಸಿಗುವುದು ಖಚಿತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್. ಟಿ. ದೇವರಾಜ್ ಹೇಳಿದರು.
ಚನ್ನರಾಯಪಟ್ಟಣದ ಮೇಗಲಕೇರಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಬಾಲ ನ್ಯಾಯ ಕಾಯ್ದೆ ಬಗ್ಗೆ ಶಿಕ್ಷಕ, ಪೊಲೀಸ್, ಅಧಿಕಾರಿಗಳು, ಸ್ವಯಂ ಸೇವಾ ಸಂಘಗಳಿಗೆ ಚುನಾಯಿತ ಜನಪ್ರತಿನಿಧಿಗಳಿಗೆ ಅರಿವು ಬೇಕಾಗಿದೆ ಎಂದರು.
ಗ್ರಾಮೀಣ ಮಕ್ಕಳೇ ಹೆಚ್ಚು: ದೇಶದಲ್ಲಿ 170 ಲಕ್ಷ ಮಕ್ಕಳು ದುಡಿಮೆಯಲ್ಲಿದ್ದಾರೆ. ಗ್ರಾಮೀಣ ಮಕ್ಕಳೇ ಹೆಚ್ಚಾಗಿದ್ದು, ಕೃಷಿ, ಮನೆಗೆಲಸದಲ್ಲಿದ್ದಾರೆ ಎಂದು ವಕೀಲರ ಸಂಘದ ಅಧ್ಯಕ್ಷ ವೈ.ಕೆ.ಪುಟ್ಟಸ್ವಾಮೀಗೌಡ ಮಾತನಾಡಿದರು. ಕಾರ್ಮಿಕ ನಿರೀಕ್ಷಕ ಪ್ರಭಾಕರ ವಿಶೇಷ ಉಪನ್ಯಾಸ ನೀಡಿ, ಶೋಷಣೆಗೊಳಗಾದ ಮಕ್ಕಳ ಪೋಷಣೆ ಮತ್ತು ರಕ್ಷಣೆ ಅಗತ್ಯವಿದೆ. ಬೀದಿ ಮಕ್ಕಳು, ಅನಾಥ ಮಕ್ಕಳು, ಕಾಣೆಯಾದ ಮಕ್ಕಳು, ಸಂಕಷ್ಟದಲ್ಲಿ ಇರುವವರಿಗೆ ನೆರವು ಮತ್ತು ಸೌಲಭ್ಯ ಅಗತ್ಯವಿದೆ ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಬಿ.ಹೊಸಮನಿ, ಮುಖ್ಯ ಶಿಕ್ಷಕ ಸಿದ್ದಲಿಂಗಪ್ಪ, ವಕೀಲರ ಸಂಘದ ಕಾರ್ಯದರ್ಶಿ ನಿಂಗರಾಜು, ಭಗವಾನ್ ಇತರರು ಇದ್ದರು.
ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ
ಹಾರನಹಳ್ಳಿ (ಅರಸೀಕೆರೆ ತಾ.): ಹಾರನಹಳ್ಳಿಯಿಂದ ವಿಠಲಾಪುರ, ತಳಲೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು, ಹೊನ್ನಾವರ ಸೇರುವ ರಸ್ತೆಯು ಗುಂಡಿ ಗೊಟರುಗಳಿಂದ ಕೂಡಿದೆ.
ಮಳೆ ಸಂದರ್ಭಗಳಲ್ಲಿ ಗುಂಡಿಗಳಲ್ಲಿ ನೀರು ತುಂಬಿ ಗುಂಡಿಗಳೇ ಕಾಣದಂತಾಗಿ ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದು ಕೊಂಡು ಆಸ್ಪತ್ರೆ ಸೇರುವ ಸ್ಥಿತಿ ನಿಮಾರ್ಣವಾಗಿದೆ ಎಂದು ವಿಠಲಾಪುರ ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾವಗಲ್, ಹಾರನಹಳ್ಳಿ ಸುತ್ತಮೂತ್ತಲ ಗ್ರಾಮಸ್ಥರು ಬೆಂಗಳೂರಿಗೆ ಹೋಗುವವರು ಸಂಪರ್ಕ ಕೋಂಡಿಯಂತ್ತಿರುವ ಈ ರಸ್ತೇಯಲ್ಲೆ ಓಡಾಟ ನಡೆಸುತ್ತಿದ್ದು, ಈ ರಸ್ತೆ ಅರಸೀಕೆರೆ, ಮೈಸೂರು ಮುಖ್ಯ ರಸ್ತೆ ಸೇರುತ್ತದೆ. ಇಲ್ಲಿ ನಡೆಯುವುದು ದುಸ್ತರವಾಗಿದ್ದು, ಇಲ್ಲಿ ಚಲಿಸುವ ವಾಹನಗಳು ಪದೇ ಪದೇ ರಿಪೇರಿಗೆ ಬರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ಈ ರಸ್ತೆಯ ದುರಸ್ತಿಗೆ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

