ಆಲೂಗೆಡ್ಡೆಗೆ ಪರ್ಯಾಯ ಬೆಳೆ ಬೆಳೆಯಲು ಪಟೇಲ್ ಶಿವರಾಂ ಸಲಹೆ
ಹಾಸನ: ಆಲೂಗೆಡ್ಡೆ ಬೆಳೆಗೆ ಇತ್ತೀಚಿನ ದಿನಗಳಲ್ಲಿ ರೋಗದ ಬಾಧೆ ಹೆಚ್ಚಾಗಿದ್ದು, ಇದನ್ನು ತಪ್ಪಿಸಲು ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ ರೈತರಿಗೆ ಸಲಹೆ ನೀಡಿದರು.
ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯ್ತಿ ವತಿಯಿಂದ ಹಾಸನ ಜಿಲ್ಲಾ ಆಲೂಗೆಡ್ಡೆ ಬೆಳೆಗಾರರಿಗೆ ಹಾಗೂ ರೈತ ಬಾಂಧವರಿಗೆ ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ಏರ್ಪಡಿಸಿದ್ದ ಆಲೂಗೆಡ್ಡೆ ಬೆಳೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಧನಕ್ಕೆ ಮನವಿ: ಆರೋಗ್ಯ ವತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಬಿ.ಲಕ್ಷ್ಮಣ ಗೌಡ ಮಾತನಾಡಿ, ಆಲೂಗೆಡ್ಡೆ ಬೆಳೆಗಾರರು ಇತ್ತೀಚಿನ ದಿನಗಳಲ್ಲಿ ತುಂಬಾ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಅನೇಕ ಬೆಳೆಗಾರರು ಸಾಲಗಾರರಾಗಿರುತ್ತಾರೆ. ಸರ್ಕಾರಹೆಚ್ಚಿನ ಸಹಾಯಧನ ನೀಡಬೇಕಾಗಿ ತಿಳಿಸಿದರು.
ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಹಾಗೂ ಪ್ರಗತಿ ಪರ ರೈತ ದೇವೇಗೌಡ ಮಾತನಾಡಿ, ಅಂಗಮಾರಿ ರೋಗಕ್ಕೆ ರೋಗ ನಿರೋಧಕ ಶಕ್ತಿ ಹೊಂದಿರುವ ತಳಿಗಳಾದ ಕುಪ್ರಿ ಸೂರ್ಯ ಮತ್ತು ಕುಪ್ರಿ ಪುಕ್ ರಾಜ್ ಇವುಗಳನ್ನು ಇಲಾಖಾ ಮಾರ್ಗದರ್ಶನದಂತೆ ಬೆಳೆಯುವಂತೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೃಷಿ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎನ್. ನಂಜುಂಡಸ್ವಾಮಿ ಮಾತನಾಡಿ, ಈ ಬಾರಿ ಮಳೆಯ ಕೊರತೆಯಿಂದಾಗಿ ಬಿತ್ತನೆ ಕುಂಠಿತವಾಗಿದೆ ಎಂದು ವಿಷಾದಿಸಿದರು. ಕಾರೆಕೆರೆ ಕೃಷಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸಿದ್ದಗಂಗಯ್ಯ, ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಡಾ. ಬಸವರಾಜು ಉಪನ್ಯಾಸ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

