ಹಾಸನ

ನಾಟಿಗೆ ಮುನ್ನ ಮಣ್ಣು ಪರೀಕ್ಷೆ

Published On :

ಚನ್ನರಾಯಪಟ್ಟಣ: ರೈತ ತನ್ನ ಜಮೀನಿನಲ್ಲಿ ಯಾವುದೇ ಬೆಳೆ ಬಿತ್ತನೆ ಅಥವಾ ನಾಟಿ ಮಾಡುವ ಮುನ್ನಾ ಮಣ್ಣು ಪರಿಕ್ಷೆ ಅತ್ಯಗತ್ಯವಾಗಿದೆ ಎಂದು ಕಂದಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಚನ್ನಕೇಶವ ತಿಳಿಸಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಭೂ ಚೇತನ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ರೈತರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಮಣ್ಣು ಪರಿಕ್ಷೆ ಮಾಡಿಸುವುದರಿಂದ ಜಮೀನಿಗೆ ಯಾವ ಪ್ರಮಾಣದಲ್ಲಿ ರಸಗೊಬ್ಬರ ನೀಡಬಹುದಾಗಿದೆ ಹಾಗೂ ಯಾವ ಗೊಬ್ಬರದ ಅವಶ್ಯವಿದೆ ಎಂಬುದನ್ನು ತಿಳಿಯಬಹುದಾಗಿದೆ ಎಂದರು. ಮುಂದಿನ ದಿನಗಳಲ್ಲಿ ಕೃಷಿ ಇಲಾಖೆ ರೈತರ ಅನುಕೂಲಕ್ಕಾಗಿ ಮಣ್ಣು ಪರಿಕ್ಷೆಯ ಕುರಿತು ಸಾಪ್ಟ್ವೇರ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತಿಸಿದ್ದು, ಇದರಿಂದ ಅತಿ ಶ್ರೀಘ್ರವಾಗಿ ಮಣ್ಣಿನ ಪರಿಕ್ಷೆ ಹಾಗೂ ಸಲಹೆಗಳನ್ನು ಪಡೆಯಬಹುದಾಗಿ ತಿಳಿಸಿದರು.
ರೈತ ಕೇವಲ ಜಮೀನನ್ನು ನಂಬಿ ಕೆಲಸ ಮಾಡದೆ ಜಮೀನಿನಲ್ಲಿಯೇ ಸಿಗುವ ವ್ಯವಸ್ಥೆಗೆ ಹೊಂದಿಕೊಂಡಂತೆ ಕುರಿ, ಕೋಳಿ, ಮೊಲ ಹಾಗೂ ಇತರೆ ಮಾಂಸದ ತಳಿಗಳನ್ನು ಬೆಳೆಸೆ ಆರ್ಥಿಕ ಮಟ್ಟವನ್ನು ಸುಧಾರಿಸಕೊಳ್ಳುವಂತೆ ಸಲಹೆ ನೀಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾಶ್ರೀನಿವಾಸ್, ತಾಲೂಕು ರೈತ ಸಂಘದ ಅಧ್ಯಕ್ಷ ಸತ್ತಿಗೌಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲೇಶ್ಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.