ರೇವಣ್ಣ ಆಕ್ಷೇಪಕ್ಕೆ ಕಾಂಗ್ರೆಸ್ ಖಂಡನೆ

ಹೊಳೆನರಸೀಪುರ: ಹಾಲು ಉತ್ಪಾದಕರ ಸಂಘದಲ್ಲಿ ಹಾಲು ಹಾಕುವ ದಲಿತರಿಗೆ ಮಾತ್ರ ಪ್ರತೀ ಲೀಟರ್ ಹಾಲಿಗೆ 2 ರು. ಹೆಚ್ಚುವರಿ ಪ್ರೋತ್ಸಾಹಧನ ನೀಡುವ ಸಮಾಜ ಕಲ್ಯಾಣ ಸಚಿವರ ಹೇಳಿಕೆಯ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿರುವ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರು, ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ. ಹರೀಶ್ ಟೀಕಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರು ಹಾಲು ಉತ್ಪಾದನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಲಿ ಎನ್ನುವ ಉದ್ದೇಶದಿಂದ ಬಡವರ ಪರವಾದ ಕಾಂಗ್ರೆಸ್ ಸರ್ಕಾರ ದಲಿತರಿಗೆ ಹೆಚ್ಚಿನ ಪ್ರೋತ್ಸಾಹ ಧನವನ್ನು ಘೋಷಿಸಲು ನಿರ್ಧರಿಸಿದ್ದರೆ, ಸ್ಥಳೀಯ ಶಾಸಕರು ರಾಜ್ಯ ಹಾಲು ಮಹಾಮಂಡಲದ ಮಾಜಿ ಅಧ್ಯಕ್ಷರೂ ಆದ ಎಚ್.ಡಿ. ರೇವಣ್ಣ ಕಂದಾಯ ರೂಪದಲ್ಲಿ ಸಂಗ್ರಹಿಸಿರುವ ತೆರಿಗೆ ಹಣವನ್ನು ರಾಜ್ಯ ಸರ್ಕಾರ ಪೋಲು ಮಾಡಲು ಹೊರಟಿದೆ ಎಂದು ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿರುವುದು ಅವರಿಗೆ ಶೋಭೆಯಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ದಲಿತರನ್ನು ಚುನಾವಣೆಯ ಸಂದರ್ಭದಲ್ಲಿ ಕೇವಲ ಮತಗಳಿಕೆಗಾಗಿ ಬಳಸಿಕೊಳ್ಳುವ ಜೆಡಿಎಸ್ನವರು, ನಂತರದಲ್ಲಿ ದಲಿತರ ಏಳಿಗೆ ಮತ್ತು ಅಭಿವೃದ್ಧಿಯನ್ನು ಎಂದೂ ಸಹಿಸಿದವರಲ್ಲ ಎಂದು ಎಚ್.ಡಿ. ರೇವಣ್ಣ ಅವರ ಹೇಳಿಕೆಯ ಕುರಿತಂತೆ ವ್ಯಂಗ್ಯವಾಡಿದ ಎಚ್.ಕೆ. ಹರೀಶ್, ಬಡಜನರು, ದೀನದಲಿತರು, ಅಶಕ್ತರ ಪರವಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ, ಶಾಧಿಭಾಗ್ಯ, ಸಾಲಮನ್ನಾ ಮೊದಲಾದ ಕಾರ್ಯಕ್ರಮಗಳನ್ನು ರೂಪಿಸಿರುವುದನ್ನು ಜೆಡಿಎಸ್ ಸಹಿಸುತ್ತಿಲ್ಲ ಎಂದು ಜೆಡಿಎಸ್ನಾಯಕ ಎಚ್.ಡಿ.ರೇವಣ್ಣ ಅವರ ಹೇಳಿಕೆಯ ಕುರಿತಂತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಪುರಸಭೆಯ ಅಧ್ಯಕ್ಷೆ ಕಲಾವತಿ ಅವರು ಪುರಸಭೆಯ ಎಂಜಿನಿಯರ್ ಬಳಿಯಲ್ಲಿ ಕಮೀಷನ್ ಪಡೆಯುವ ಕುರಿತಂತೆ ನಡೆಸಿರುವ ಚರ್ಚೆ ಕುರಿತಂತೆ ಸಾರ್ವಜನಿಕರ ಮೊಬೈಲ್ಗಳಲ್ಲಿ ಹರಿದಾಡುತ್ತಿರುವ ಸಂಭಾಷಣೆಯು ಶಾಸಕ ಎಚ್.ಡಿ. ರೇವಣ್ಣ ಅವರಿಗೆ ತಿಳಿದಿದ್ದರೂ ಇದುವರೆವಗೂ ಪುರಸಭೆಯ ಅಧ್ಯಕ್ಷೆ ಸ್ಥಾನದಿಂದ ಕಲಾವತಿ ಅವರನ್ನು ರಾಜಿನಾಮೆ ನೀಡುವಂತೆ ಸೂಚಿಸದಿರುವ ಕುರಿತಂತೆ ತೀವ್ರ ವಾಗ್ದಾಳಿ ನಡೆಸಿದರು.
ಕೂಡಲೇ ಪುರಸಭಾಧ್ಯಕ್ಷೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸದಿದ್ದಲ್ಲಿ, ಪುರಸಭೆಯ ಸಾಮಾನ್ಯ ಸಭೆಯು ನಡೆಯುವ ದಿನದಂದೇ ಪುರಸಭೆಯ ಮುಂದೆ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿ ಶೃತಿ, ಕಾಂಗ್ರೆಸ್ ಕಾರ್ಯಕರ್ತೆಕಳಸಮ್ಮ, ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಟಿ. ಲಕ್ಷ್ಮಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


