ಹಾಸನ

ಹಾಸನಾಂಬ ಮಂದಿರ ಸುತ್ತಲ ಮನೆಗಳ ತೆರವು

Published On :

ಹಾಸನ: ಜಿಲ್ಲೆಯ ಅದಿದೇವತೆ ಹಾಸನಾಂಬೆ ದೇವಾಲಯದ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಉಪ ವಿಭಾಗಾಧಿಕಾರಿ ಶರತ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ತಹಸೀಲ್ದಾರ್ ಮಂಜುನಾಥ್ ಅವರು, ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದ ಅಭಿವೃದ್ಧಿ ಕೆಲಸಗಳ ವೀಕ್ಷಣೆ ನಡೆಸಿದರು.
 ಪ್ರಖ್ಯಾತ ಹಾಸನಾಂಬೆ ದೇವಿಗೆ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳನ್ನು ಜಿಲ್ಲಾಡಳಿತ ನಡೆಸುತ್ತಿದೆ. ಈಗಾಗಲೇ ರು. 2 ಕೋಟಿ ವೆಚ್ಚದಲ್ಲಿ ಈಗಾಗಲೇ ದೇವಾಲಯ ಗೋಪುರದ ಕೆಲಸ ಕಾರ್ಯ ಪೂರ್ಣಗೊಂಡಿದ್ದು, ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿ ಸಾಗುತ್ತಿದೆ.
ಮನೆ ತೆರವು: ಜೊತೆಗೆ ದೇವಾಲಯಕ್ಕೆ ಹೊಂದಿಕೊಂಡಂತೆ ಇದ್ದಂತಹ 9 ಹಳೇ ಮನೆಗಳನ್ನು ನಗರಸಭೆ ತನ್ನ ವಶಕ್ಕೆ ತೆಗೆದುಕೊಂಡು ತೆರವು ಕಾರ್ಯಾಚರಣೆ ನಡೆಸುತ್ತಿದೆ. ದೇವಾಲಯಕ್ಕೆ ವಹಿಸಿಕೊಂಡಿರುವ ಜಾಗವನ್ನು ಅಲ್ಲಿ ವಾಸವಾಗಿದ್ದಂತಹವರು ದೇವಾಲಯಕ್ಕೆ ಜಾಗವನ್ನು ನೀಡಿದ್ದಾರೆ. ನಗರಸಭೆಯು ಈ ಜಾಗದಲ್ಲಿ ಇದ್ದಂತಹ ಹಳೆ ಮನೆಗಳನ್ನು ತೆರವುಗೊಳಿಸುತ್ತಿದ್ದು, ನಂತರ ಈ ಜಾಗದಲ್ಲಿ ಶೌಚಾಲಯ ಹಾಗೂ ಕಾಪೌಂಡ್ ನಿರ್ಮಾಣ ಮಾಡಿ ಇಲ್ಲಿರುವ ರಸ್ತೆಯನ್ನು ಅಗಲೀಕರಣ ಮಾಡಿ ದೇವಾಲಯಕ್ಕೆ ಬರುವಂತಹರಿಗೆ ಅನುಕೂಲ ಮಾಡಲಾಗುತ್ತದೆ. ದೇವಾಲಯಕ್ಕೆ ಹೊಂದಿಕೊಂಡು ಇದ್ದಂತಹ ಮನೆಗಳಿಗೆ ಪರಿಹಾರ ನೀಡುವ ಬಗ್ಗೆ ಈ ಹಿಂದೆ ನಗರಸಭೆಯಲ್ಲಿ ಚರ್ಚೆಯನ್ನು ನಡೆಸಿ ಚದರಡಿಗೆ 3 ಸಾವಿರ ರು.ನಂತೆ ಮನೆ ಮಾಲೀಕರಿಂದ ಖರೀದಿಸಲಾಗಿದೆ. ಈಗಾಗಾಲೇ 1.20 ಕೋಟಿ ರು.ಗಳ ಪರಿಹಾರದ ಹಣವನ್ನು ಮನೆಗಳ ಮಾಲೀಕರಿಗೆ ನೀಡಲಾಗಿದ್ದು, ಮನೆ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.
ಹಾಸನಾಂಬೆ ದೇವಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಭಕ್ತರ ಅನುಕೂಲಕ್ಕಾಗಿ ಶೌಚಾಲಯ ಹಾಗೂ ಮೂಲಭೂತ ಸೌಕರ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮವನ್ನು ಕೈಗೊಂಡಿದ್ದು, ದೇವಾಲಯಕ್ಕೆ ಹೊಂದಿಕೊಂಡಂತೆ ಇದ್ದ 9 ಮನೆಗಳನ್ನು ವಶಪಡಿಕೊಂಡಿದ್ದು, ಆ ಜಾಗದಲ್ಲಿ ಶೌಚಾಲಯ ನಿರ್ಮಿಸಿ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತದೆ. ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗುತ್ತಿದೆ.
ಟ ವಿ. ಅನ್ಬುಕುಮಾರ್ ಜಿಲ್ಲಾಧಿಕಾರಿ

ದೇವಾಲಯಕ್ಕೆ ಹೊಂದಿಕೊಂಡಂತೆ ಇದ್ದಂತಹ 9 ಮನೆಗಳನ್ನು ತೆರವು ಮಾಡಲಾಗುತ್ತಿದೆ. ಈಗಾಗಲೇ ಈ ಜಾಗದಲ್ಲಿ ವಾಸವಾಗಿದ್ದವರಿಗೆ ಚದರಡಿಗೆ 3 ಸಾವಿರ ರು.ನಂತೆ ಪರಿಹಾರವನ್ನು ನೀಡಲಾಗಿದೆ. ಜೊತೆಗೆ ಅವರಿಗೆ ನಿವೇಶನ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ ಎಂದರು.
ಟ ಕೃಷ್ಣಮೂರ್ತಿ ನಗರಸಭೆ ಆಯುಕ್ತ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.