ಹಾಸನ

ಅನಾಥಾಶ್ರಮದ ಮೇಲೆ ಅಧಿಕಾರಿಗಳ ದಾಳಿ

Published On :

ಹಾಸನ: 'ಬ್ಲೂ ಡೈಮೆನ್ಸಾ' ಅನಾಥಾಶ್ರಮದಲ್ಲಿ ಅಕ್ರಮವಾಗಿ 4 ಹೆಣ್ಣುಮಕ್ಕಳನ್ನು ಇಟ್ಟುಕೊಳ್ಳಲಾಗಿದೆ ಎಂಬ ದೂರಿನ ಮೇರೆಗೆ ಮಕ್ಕಳ ಸಂರಕ್ಷಣಾ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ. ನಗರದ ಆರ್.ಸಿ. ರಸ್ತೆಯ ಸಮೀಪ ಇರುವ ಅನಾಥಾಶ್ರಮ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂಬ ಕಾರಣ ನೀಡಿ ಇದರ ಪರವಾನಗಿ ರದ್ದುಪಡಿಸಲಾಗಿದೆ. ಹೀಗಿದ್ದರೂ ಅಕ್ರಮವಾಗಿ ಮಕ್ಕಳನ್ನು ಇಟ್ಟುಕೊಳ್ಳಲಾಗಿದೆ ಎಂದು ಮಕ್ಕಳ ಸಂರಕ್ಷಣಾ ಇಲಾಖೆಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಒಪ್ಪಿಸಲು ನಿರಾಕರಣೆ: ಮಕ್ಕಳನ್ನು ವಶಕ್ಕೆ ಒಪ್ಪಿಸಲು ಸಂಸ್ಥೆಯವರು ನಿರಾಕರಿಸಿದ ಹಿನ್ನೆಲೆಯಲ್ಲಿ ಕೆಲಕಾಲ ಮಾತಿನ ಚಕಮಕಿ ನಡೆದಿದೆ. ಸ್ಥಳಕ್ಕಾಗಿಸಿದ ಬಜರಂಗದಳ ಕಾರ್ಯಕರ್ತರು ಸಂಸ್ಥೆಯಲ್ಲಿನ ಹೆಣ್ಣು ಮಕ್ಕಳನ್ನು ಅಧಿಕಾರಿಗಳು ವಶಕ್ಕೆ ಪಡೆಯುವಂತೆ ಒತ್ತಾಯಿಸಿದರು. ಸಂಸ್ಥೆ ಕಾರ್ಯದರ್ಶಿ ಸೋಮಶೇಖರ್ ಮಕ್ಕಳನ್ನು ಶುಕ್ರವಾರ ಒಪ್ಪಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಿಂತಿರುಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.