ಜಿಲ್ಲಾ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಭರವಸೆ
ಹಾಸನ: ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳು ಸೇರಿದಂತೆ ಜಿಲ್ಲೆಯಲ್ಲಿರುವ ನಾನಾ ಸಮಸ್ಯೆ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ್ದು, ಅವರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಮತ್ತು ಪದಾಧಿಕಾರಿ ತಮ್ಲಪುರದ ಕೃಷ್ಣೇಗೌಡ ತಿಳಿಸಿದರು.
ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮೇ 31ರಂದು ಬೆಂಗಳೂರಿನಲ್ಲಿ ಕೇಂದ್ರ ರಾಸಯನಿಕ ಸಚಿವ ಅನಂತಕುಮಾರ್ ಇವರನ್ನು ಭೇಟಿ ಮಾಡಿ ರೈತರ ಗೊಬ್ಬರದ ಸಮಸ್ಯೆಗಳು ಹಾಗೂ ಸಾವಯವ ಗೊಬ್ಬರದ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರ ಸಲ್ಲಿಸಿದ್ದು, ಅವರು ಸೂಕ್ತ ಕ್ರಮ ತೆಗೆದುಕೊಳ್ಳಲು ಭರವಸೆಯನ್ನು ನೀಡಿದ್ದಾರೆ ಎಂದರು.
ಹಾಸನ-ಬೆಂ. ರೈಲು ಮಾರ್ಗ: ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದಗೌಡರನ್ನು ಪುತ್ತೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ ಹಾಸನ-ಬೆಂಗಳೂರು ರೈಲು ಮಾರ್ಗವನ್ನು ತ್ವರಿತಗತಿಯಲ್ಲಿ ನಿರ್ಮಿಸಬೇಕು. ಹಾಸನ ನಗರದ ಎನ್.ಆರ್. ವೃತ್ತದಿಂದ ಹೊಸ ಬಸ್ಸು ನಿಲ್ದಾಣದವರೆಗೂ ಮೇಲ್ಸೇತುವೆ ತುರ್ತಾಗಿ ನಿರ್ಮಿಸಿ, ಮಂಗಳೂರು-ಬೆಂಗಳೂರು ಬುಲೆಟ್ ಟ್ರೈನ್ ಸಂಚರಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವಂತೆ ಮನವ ಮಾಡಲಾಯಿತು ಎಂದರು. ರೈಲು ನಿಲ್ದಾಣದಿಂದ ನಗರಕ್ಕೆ ರಾತ್ರಿ ಸಮಯದಲ್ಲಿ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಬಹಳ ತೊಂದರೆ ಉಂಟಾಗಿದ್ದು, ತಕ್ಷಣ ಕೆಎಸ್ ಆರ್ಟಿಸಿ ಅಧಿಕಾರಿಗಳು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ಅಪಹರಣ ಪ್ರಕರಣ ಹೆಚ್ಚಳ: ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಅಪಹರಣ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ ಸೂಕ್ತ ಕ್ರಮ ಜರುಗಿಸಬೇಕು, ನಗರದಲ್ಲಿ ಕಸ ಮತ್ತು ಪಾರ್ಥೇನಿಯಂ ಹೆಚ್ಚಾಗಿರುವುದರಿಂದ ನಗರಸಭೆ ಎಚ್ಚೆತ್ತು ಕೆಲಸ ಮಾಡಬೇಕಾಗಿದೆ ಎಂದ ಅವರು ಮನವಿ ಮಾಡಿದರು.
ಗೋವುಗಳನ್ನು ಕಸಾಯಿಖಾನೆಗೆ ಕಳ್ಳ ಸಾಗಣಿಕೆ ಮೂಲಕ ಸಾಗಿಸಲಾಗುತ್ತಿದೆ. ಇಂತಹ ಪ್ರಕರಣವನ್ನು ನಿಲ್ಲಿಸಲು ರಕ್ಷಣಾ ಇಲಾಖೆ ಗಮನ ನೀಡಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಹಲವು ತಿಂಗಳಿನಿಂದ ಜಿಲ್ಲೆಗೆ ಬರದೆ ಬೇಜವಾಬ್ದಾರಿಯಿಂದ ವರ್ತಿಸಿದ್ದು, ಸಚಿವರ ವಿರುದ್ಧ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು. ಶಿವಣ್ಣ ಬಿಟ್ಟಗೌಡನಹಳ್ಳಿ ಬಿ.ಎ.ಸುರೇಶ್, ಎಸ್.ಪಿ.ಕುಮಾರ್ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

