ಹಾಸನ

ನೀರಾವರಿ ಸಲಹಾ ಸಮಿತಿ ರಚನೆ ಖಚಿತ

Published On :

ಚನ್ನರಾಯಪಟ್ಟಣ: ಕಾವೇರಿ ನೀರು ಹಂಚಿಕೆ ಕುರಿತು ನೀರಾವರಿ ಸಲಹಾ ಸಮಿತಿ ರಚನೆ ಮಾಡಬಾರದೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಿಳಿಸಿದರು.
 ತಾಲೂಕಿನ ಆನೆಕೆರೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ  ಶಂಬುಲಿಂಗೇಶ್ವರ ದೇವಾಲಯ ಉಧ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾವೇರಿ ನೀರು ಹಂಚಿಕೆ ಕುರಿತು ಏನೆಲ್ಲಾ ಮನವಿ ಮಾಡಿದರೂ ನೀರಾವರಿ ಸಲಹಾ ಸಮಿತಿ ರಚನೆ ಖಚಿತವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಈ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡುವುದು ಖಚಿತ ಎಂದರು.
ತಮಿಳರ ನೋಡಿ ಕಲಿಯಿರಿ: ರಾಜ್ಯದಲ್ಲಿ ಬೆಜೆಪಿ ಪಕ್ಷದ ಸಂಸತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಅವರುಗಳು ಹಾಗೂ ಕಾಂಗ್ರೆಸ್ ಸದಸ್ಯರು ಒಗ್ಗೂಡಿ ಪ್ರಶ್ನಿಸಲು ಮುಂದಾಗದ ಕಾರಣ ರಾಜ್ಯಕ್ಕೆ ಅನ್ಯಾಯವಾಗುವುದು ಖಚಿತ. ರಾಜ್ಯದ ಸಂಸದರು ತಮಿಳುನಾಡಿನ ರಾಜಕೀಯವನ್ನು  ನೋಡಿ ಕಲಿಯಬೇಕು ಎಂದರು.  ನೀರಾವರಿ ಸಲಹಾ ಸಮಿತಿ ರಚನೆಯಾದರೆ ರಾಜ್ಯದ ಕಾವೇರಿ ಕಣಿವೆಯಲ್ಲಿನ ಏತ ನೀರಾವರಿ ಯೋಜನೆಗಳು ಸ್ಥಗಿತಗೊಳ್ಳುವುದಲ್ಲದೆ, ನಾಲೆಗಳಲ್ಲಿ ನೀರ ಹಾಯಿಸುವಾಗ ಪ್ರತಿಯೊಂದನ್ನು ಅಳತೆ ಮಾಡಿ ಸಮಿತಿ ಒಪ್ಪಿಗೆ ಅಗತ್ಯವಾಗುತ್ತದೆ ಎಂದು ತಿಳಿಸಿದರು.
ಒಟ್ಟಾಗಿ ಹೋರಾಡಬೇಕು: ಕಾವೇರಿ ಕಣಿವೆಯಲ್ಲಿನ ರೈತರು ಮುಂದಿನ ದಿನಗಳಲ್ಲಿ ಕಣ್ಣೀರಿನಲ್ಲಿ ಕೈ ತೊಳೆಯುವ ಪರಿಸ್ಥಿತಿ ಬರಲಿದೆ. ತಮಿಳುನಾಡಿನಂತೆ ತಮ್ಮ ರಾಜ್ಯದ ಎಲ್ಲಾ ಸಂಸದರು ಒಗ್ಗಟ್ಟಾಗಿ ಹೋರಾಡುವುದೊಂದೆ ಬಾಕಿಯಿದೆ ಎಂದು ಅವರು ತಿಳಿಸಿದರು.
ರೈಲು ಪ್ರಯಾಣ ದರ ಏರಿಕೆ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಪರಿಣಾಮವನ್ನು ನಾವು ಬಿಜೆಪಿ ಸರ್ಕಾರದಲ್ಲಿ ನೋಡಬೇಕಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.