ಹಾಸನ

ಪ್ರಯಾಣ ದರ ಹೆಚ್ಚಳ ಬಿಜೆಪಿ ಸಾಧನೆ

Published On :

ಹಾಸನ: ಕೇಂದ್ರದ ಬಿಜೆಪಿ ಸರ್ಕಾರ ರೈಲು ಪ್ರಯಾಣ ದರ ಹಾಗೂ ಸಗಟು ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ ಆರೋಪಿಸಿದರು.
 ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಆಯ-ವ್ಯಯ ನಡೆಯುವ ಮೊದಲೇ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿದ ಅವರು, ಇದಕ್ಕೆ ಇಡೀ ರಾಷ್ಟ್ರದಲ್ಲಿಯೇ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಮುಖ್ಯಮಂತ್ರಿ ಕೂಡ ದರ ಇಳಿಸುವಂತೆ ಒತ್ತಾಯ ಮಾಡಿದ್ದಾರೆ ಎಂದರು.
ಮೊದಲ ಸಾಧನೆ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲು ರೈಲ್ವೆ ದರ ಏರಿಕೆ, ಸಗಟು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಮೊದಲ ತಮ್ಮ ಸಾಧನೆಯನ್ನು ಪ್ರದರ್ಶಿಸಿದೆ ಎಂದು ವ್ಯಂಗ್ಯವಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನೀಡಿದ ಆಶ್ವಾಸನೆಗಳು ಈಡೇರುವುದಿಲ್ಲ ಎಂದು ಹೇಳಿದರು.  ಸಭೆಯಲ್ಲಿ ಉಪಾಧ್ಯಕ್ಷ ನಾರಾಯಣಗೌಡ, ಮುಖಂಡರಾದ ಲಲಿತಮ್ಮ, ಮುನಿಸ್ವಾಮಿ, ಎಚ್.ಕೆ.ಮಹೇಶ್, ಶೇಖರಪ್ಪ, ಬಾಲಶಂಕರ್, ತಾರಾ, ಎಚ್.ಟಿ.ಲಕ್ಷಣ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.