ಹಾಸನ

ಕಿಡಿಗೇಡಿಗಳಿಂದ ಕಸಾಪ ಭವನಕ್ಕೆ ಕಲ್ಲು

Published On :

ಹಾಸನ: ಕಳೆದ ರಾತ್ರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದ ಕಿಟಕಿಗಳಿಗೆ ಕಿಡಿಗೇಡಿಗಳು ಕಲ್ಲು ತೂರಿ ಗಾಜುಗಳನ್ನು ಪುಡಿ ಪಡಿ ಮಾಡಿರುವ ಘಟನೆ ನಡೆದಿದೆ.
 ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದ ಸುತ್ತಮುತ್ತಲಿನ ಸುಮಾರು 13 ಕಿಟಕಿಗಳ ಬಹುತೇಕ ಗಾಜುಗಳನ್ನು ಕಲ್ಲು ತೂರಿ ಒಡೆದು ಹಾಕಲಾಗಿದ್ದು, ಗಾಜು ಛಿವಾಗಿವೆ. ಅಲ್ಲೇ ಇಂಥ ಕೃತ್ಯ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.   ಕಸಾಪ ದಲ್ಲಿ ವರ್ಷವಿಡೀ ಒಂದಲ್ಲ ಒಂದು ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ. ಅಂತೆಯೇ ನಿನ್ನೆಯೂ ಸಹ ಒಂದು ಕಾರ್ಯಕ್ರಮ ನಡೆದಿದೆ. ಅದಾದ ನಂತರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ರಾತ್ರಿ 9 ಗಂಟೆವರೆಗೂ ಇದ್ದು ಹೋಗಿದ್ದಾರೆ. ಅದಾದ ಬಳಿಕ ಈ ಕೃತ್ಯ ನಡೆದಿದೆ. ಯಾವುದೋ ವೈಷಮ್ಯ ಹಿನ್ನೆಲೆಯಲ್ಲಿ ಅಥವಾ ಕುಡಿದ ಅಮಲಿನಲ್ಲಿ ಹೀಗೆ ಮಾಡಿರಬಹುದು ಎಂದು ಶಂಕಿಸಲಾಗಿದೆ.  
 ಕನ್ನಡ ಸಾಹಿತ್ಯ ಪರಿಷತ್ ಭವನ ಒಂದು ಗೌರವಯುತ ಸಂಸ್ಥೆಯಾಗಿದ್ದು, ಇದರ ಮೇಲೆಯೇ ಇಂಥ ದುಷ್ಕತ್ಯ ನಡೆದಿರುವುದಕ್ಕೆ ತೀವ್ರ ನೋವು ವ್ಯಕ್ತಪಡಿಸಿರುವ ಕಸಾಪ ಅಧ್ಯಕ್ಷ ಡಾ.ಜನಾರ್ದನ್, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದ್ದು, ಕೂಡಲೇ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಶಿಸ್ತು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.