ಬಡ್ತಿಯಲ್ಲಿ ಶಿಕ್ಷಕರಿಗೆ ಅನ್ಯಾಯ: ಆರೋಪ
ಹೊಳೆನರಸೀಪುರ: ರಾಜ್ಯ ಸರ್ಕಾರವು ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ತಂದಿರುವ ತಿದ್ದುಪಡಿಯಿಂದಾಗಿ ಬಡ್ತಿ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಕರ್ನಾಟಕ ರಾಜ್ಯ ಬಡ್ತಿ ಪಡೆದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಈ ಕುರಿತಂತೆ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿರುವ ತಾಲೂಕು ಘಟಕವು, ಇಲ್ಲಿನ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಭೇಟಿ ಮಾಡಿ, ಬಡ್ತಿ ಪಡೆದ ಶಿಕ್ಷಕರಿಗೆ ನಂತರದಲ್ಲಿ ಬಡ್ತಿ ನೀಡುವ ಸಂದರ್ಭದಲ್ಲಿ ನೇಮಕಾತಿ ನಿಯಮದಂತೆ ಮೀಸಲಾತಿ ನೀಡುವುದು. ಶಿಕ್ಷಕರ ವರ್ಗಾವಣೆಯಲ್ಲಿ ಸೇವೆಗೆ ಸೇರಿದ ದಿನಾಂಕವನ್ನು ಪರಿಗಣಿಸಿದೆ. ಬಡ್ತಿ ಪಡೆದ ದಿನಾಂಕವನ್ನು ಸೇವಾ ಜೇಷ್ಠತೆ ಪರಿಗಣಿಸಿರುವುದರಿಂದ ವರ್ಗಾವಣೆಯಲ್ಲಿ ಬಡ್ತಿ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸರ್ಕಾರವನ್ನು ಈ ಬಾರಿಯ ವಿಧಾನಸಭೆಯ ಅಧಿವೇಶನದಲ್ಲಿ ಒತ್ತಾಯಿಸುವಂತೆ ಕೋರಿದೆ ಎಂದು ಕರ್ನಾಟಕ ರಾಜ್ಯ ಬಡ್ತಿ ಪಡೆದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಟಿ.ಆರ್.ಧರ್ಮರಾಜ್ ತಿಳಿಸಿದ್ದಾರೆ.
ಕಾಲಮಿತಿ ಬಡ್ತಿ ನೀಡಿ: ಆದರೆ ಪ್ರಾಥಮಿಕ ಶಾಲೆಯಿಂದ ಬಡ್ತಿ ಪಡೆದ 13 ಸಾವಿರ ಶಿಕ್ಷಕರು ತಮ್ಮ ಸೇವಾ ಅವಧಿಯಲ್ಲಿ ದೊರೆಯುವ 10ರಿಂದ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸರ್ಕಾರವು ನೀಡುವ ಕಾಲಮಿತಿ ಬಡ್ತಿಗಳನ್ನು ನಿರಾಕರಿಸಲಾಗಿದ್ದು, ಪ್ರತಿಯೊಬ್ಬ ಬಡ್ತಿ ಪಡೆದ ಶಿಕ್ಷಕರು ತಮ್ಮ ಕಿರಿಯ ಶಿಕ್ಷಕರಿಗಿಂತ ವೇತನದಲ್ಲಿ ಕಡಿಮೆ ವೇತನ ಪಡೆಯುತ್ತಿರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಾಜ್ಯ ಬಡ್ತಿ ಪಡೆದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ್ ತಿಳಿಸಿದ್ದು, ಕೂಡಲೇ ರಾಜ್ಯ ಸರ್ಕಾರವು ಈ ತಾರತಮ್ಯ ನೀತಿಯನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ತಾಲೂಕು ಘಟಕದ ಕಾರ್ಯದರ್ಶಿ ಆರ್.ಉಮೇಶ್, ಜಿಲ್ಲಾ ಪ್ರತಿನಿಧಿ ಎಂ.ಕೆ.ಮಧುಸೂದನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

