ಟಿಸಿ ದುರಸ್ತಿಗೊಳಿಸದ ವಿರುದ್ಧ ಪ್ರತಿಭಟನೆ
ಹೊಳೆನರಸೀಪುರ: ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟುಹೋಗಿ ಹದಿನೈದು ದಿನಗಳಾದರೂ ದುರಸ್ತಿಗೊಳಿಸದೇ ನಿರ್ಲಕ್ಷ್ಯ ತಾಳಿರುವ ಇಲ್ಲಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವಿರುದ್ಧ ತಾಲೂಕಿನ ಕಡವಿನಕೋಟೆ ಗ್ರಾಮಸ್ಥರು ಪಟ್ಟಣದಲ್ಲಿನ ವಿದ್ಯುತ್ ಇಲಾಖೆಯ ಕಚೇರಿಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಡವಿನಕೋಟೆ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ನಿಂತಿರುವ ಬಗ್ಗೆ ಇಲ್ಲಿನ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವನ್ನು ಖಂಡಿಸಿ ಇಲಾಖಾ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಕೂಡಲೇ ತಮ್ಮ ಗ್ರಾಮದಲ್ಲಿನ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ ಮಾಡಿದ್ದರೂ, ದೂರವಾಣಿಯಲ್ಲಿ ಉಡಾಫೆಯಿಂದ ಮಾತನಾಡುವ ಇಲ್ಲಿನ ವಿದ್ಯುತ್ ಇಲಾಖೆಯ ಅಧಿಕಾರಿಯ ವಿರುದ್ಧ ಘೋಷಣೆಗಳನ್ನು ಕೂಗಿದ ಕಡವಿನಕೋಟೆ ಗ್ರಾಮಸ್ಥರು, ಕೂಡಲೇ ಸಂಬಂಧಿಸಿದ ಅಧಿಕಾರಿಯು ಸ್ಥಳಕ್ಕೆ ಬಂದು ಸಮಜಾಯಿಷಿ ನೀಡುವಂತೆ ಆಗ್ರಹಿಸಿದರು.
ವಿಷಯ ತಿಳಿದ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಇಇ ನರಸಿಂಹಮೂರ್ತಿ ಅವರು ಪ್ರತಿಭಟನಾನಿರತರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಕೂಡಲೇ ವಿದ್ಯುತ್ ಪರಿರ್ತಕವನ್ನು ಬದಲಾಯಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಕಡವಿನಕೋಟೆ ಗ್ರಾಮಸ್ಥರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

