ಹಾಸನ

ರಕ್ತದಾನ ಎಲ್ಲರ ಕರ್ತವ್ಯ

Published On :

ಚನ್ನರಾಯಪಟ್ಟಣ: ಮನುಷ್ಯನಾಗಿ ಹುಟ್ಟಿದ ಮೇಲೆ ರಕ್ತದಾನ ಮಾಡಬೇಕು. ರಕ್ತದಾನ ಮಾಡದೆ ಸಾಯಬಾರದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಮೇಲ್ವಿಚಾರಕ ರವಿಕುಮಾರ್ ತಿಳಿಸಿದರು.
 ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಪಟ್ಟಣದ ರೆಡ್ ರಿಬ್ಬನ್ ಘಟಕ, ವಿಶ್ವ ರಕ್ತದಾನಿಗಳ ದಿನಾಚರಣೆ, ಪಟ್ಟಣ ಹಾಗೂ ತಾಲೂಕಿನ ಸಮಸ್ಥ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಮಾತನಾಡಿದರು.
ರಕ್ತದಾನ ಮಾಡಿ: ಕಾಲೇಜಿನ ಮಕ್ಕಳು ರಕ್ತದಾನ ಮಾಡುವುದರಿಂದ ಅವರಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಬೊಜ್ಜು ರಕ್ತದ ಒತ್ತಡ ನಿಯಂತ್ರಣದಲ್ಲಿರುವುದಷ್ಟೇ ಅಲ್ಲ. ಹೆಣ್ಣು ಮಕ್ಕಳು ಬ್ಯೂಟಿ ಪಾರ್ಲರ್‌ಗೆ ವೆಚ್ಚ ಮಾಡುವ ಖರ್ಚು ಉಳಿಯುತ್ತದೆ ಎಂದರು.  ಜಿಲ್ಲಾ ಪಂಚಾಯಿತಿ ಸದಸ್ಯೆ ಕುಸುಮಾ ಬಾಲಕೃಷ್ಣ ಮಾತನಾಡಿ, ನೇತ್ರದಾನದಿಂದ ಒಬ್ಬರಿಗೆ ದೃಷ್ಟಿ ನೀಡಿದರೆ ರಕ್ತದಾನದಿಂದ ಜೀವ ಉಳಿಸಬಹುದು ಎಂದರು.
ಎಲ್ಲರ ಕರ್ತವ್ಯ: ಸನ್ಮಾನ ಸ್ವೀಕರಿಸಿದ ದಾವಣೆಗೆರೆ ಮಾಡಿಶಿವಕುಮಾರ್ ಮಾತನಾಡಿ, ರಕ್ತದಾನ ಮಾಡುವುದೇ ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ. ರಕ್ತದಾನ ಮಾಡಿದ ಕೆಲವೇ ಕ್ಷಣದಲ್ಲಿ ದಾನಿಯ ದೇಹದಲ್ಲಿ  ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆಯಲ್ಲಿ ಶೇಖರಣೆಯಾಗುತ್ತದೆ. ಪುರಷರು 3 ತಿಂಗಳಿಗೊಮ್ಮೆ ಮತ್ತು  ಹೆಂಗಸರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರು.
 ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಆಪ್ತ ಸಮಾಲೋಚಕ ಕೆಂಚೇಗೌಡ ಸ್ವಾಗತಿಸಿದರು, ಜಿಲ್ಲಾ ಪಂಚಾಯ್ತಿ ಪ್ರಭಾರಿ ಅಧ್ಯಕ್ಷ ಶಿವಶಂಕರ್ಕುಂಟೆ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷ ಸಿ.ಜಿ.ಮಂಜಣ್ಣ ವಹಿಸಿದ್ದರು. ತಾಲೂಕು ರಕ್ಷಣಾ ವೇದಿಕೆ ಅಧ್ಯಕ್ಷ ಮಧು ಕರಡೇವು, ಉಪನ್ಯಾಸಕ ಶಿವರಾಂ ಹಾಗೂ ಆಶಾ ಕಾರ್ಯಕರ್ತರು, ಆಸ್ಪತ್ರೆ ಸಿಬ್ಬಂದಿ ಇದ್ದರು. ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಪ್ರಾಂಶುಪಾಲ ಬಿ.ಎಲ್. ಅರುಣ್ ವಂದಿಸಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.