ಉತ್ತಮ ಪರಿಸರವಿದ್ದಾಗ ವ್ಯಾಜ್ಯಗಳ ವಿಲೇವಾರಿ ಸುಗಮ
ಕ.ಪ್ರ.ವಾರ್ತೆ ್ಣ ಹಾಸನ ್ಣ ಜೂ 28
ನ್ಯಾಯಾಧೀಶರು ಉತ್ತಮ ಪರಿಸರದಲ್ಲಿ ವಾಸವಿದ್ದರೆ ಆದಷ್ಟು ಬೇಗ ಹಾಗೂ ಉತ್ತಮವಾದ ತೀರ್ಪು ನೀಡುವ ಮೂಲಕ ವ್ಯಾಜ್ಯಗಳ ವಿಲೇವಾರಿ ಮಾಡಲು ಸಹಕಾರಿಯಾಗಲಿದೆ ಎಂದು ಹೈಕೋರ್ಟ್ ನ್ಯಾಯಾಧೀಶ ಕೆ.ಎಲ್. ಮಂಜುನಾಥ್ ಹೇಳಿದರು.
ಬೇಲೂರು ರಸ್ತೆಯಲ್ಲಿ ನ್ಯಾಯಾಧೀಶರಿಗೆ ನೂತನವಾಗಿ ನಿರ್ಮಿಸಿರುವ ವಸತಿ ಕಟ್ಟಡಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನ್ಯಾಯಾಧೀಶರು ಈ ಹಿಂದೆ ಮನೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಅವರ ಅನುಕೂಲಕ್ಕೆ ತಕ್ಕದಾದಂತಹ ಮನೆಗಳು ಲಭ್ಯವಾಗುತ್ತಿರಲಿಲ್ಲ. ಆದರೆ ಪ್ರಸ್ತುತ ನ್ಯಾಯಾಧೀಶರಿಗೆ ವಸತಿ ಗೃಹಗಳನ್ನು ಸರ್ಕಾರ ಒದಗಿಸುವ ಮೂಲಕ ಸ್ವಲ್ಪಮಟ್ಟಿಗೆ ಸುಧಾರಣೆಯನ್ನು ತಂದಿದೆ ಎಂದರು.
ನೂತನ ಕಟ್ಟಡ: ಹಾಸನದಲ್ಲಿ 8 ಎಕರೆ ಪ್ರದೇಶದಲ್ಲಿ ಪ್ರಸ್ತುತ ನಾಲ್ಕು ವಸತಿ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಿದ್ದು, ಉತ್ತಮವಾದ ವಾತಾರವಣದಿಂದ ಕೂಡಿದೆ. ನ್ಯಾಯಾಧೀಶರು ಉತ್ತಮ ಪರಿಸರದಲ್ಲಿ ವಾಸವಾಗಿದ್ದರೆ ವ್ಯಾಜ್ಯಗಳ ಶೀಘ್ರ ವಿಲೇವಾರಿ ಹಾಗೂ ಉತ್ತಮವಾದ ತೀರ್ಪವನ್ನು ನೀಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಸತಿ ಗೃಹಕ್ಕೆ ಜಾಗವನ್ನು ಗುರುತು ಮಾಡಲಾಗಿದೆ. ಈ ಪ್ರದೇಶದಲ್ಲಿ ಇನ್ನು ನಾಲ್ಕು ವಸತಿ ಗೃಹಗಳ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ಹೈಕೋರ್ಟ್ ನ್ಯಾಯಾಧೀಶ ಹಾಗೂ ಹಾಸನ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಬಿ.ಎಸ್.ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನ್ಯಾಯಾಧೀಶರ ಬಹಿರಂಗ ಶುದ್ಧಿಯಾಗಿದ್ದರೆ ಅಂತರಂಗವು ತಾನಾಗಿಯೇ ಶುದ್ಧಿಯಾಗಿ ಉತ್ತಮ ತೀರ್ಪನ್ನು ನೀಡಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ್ ಸಿಂಗ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಕೆ.ಆರ್.ರುದ್ರಪ್ಪ, ಕಾರ್ಯಪಾಲಕ ಎಂಜಿನಿಯರ್ ಎಚ್.ಆರ್.ಕೃಷ್ಣಮೂರ್ತಿ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

