ಸಮರಸ ದಾಂಪತ್ಯಕ್ಕೆ ಸಹನೆ ಅಗತ್ಯ
ಬೇಲೂರು: ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯು ಬೇಲೂರಿನಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದ ಕೆಲಸ ಮಾಡುತ್ತಿದೆ ಎಂದು ಶೋಭ ಜಯಣ್ಣಗೌಡ ತಿಳಿಸಿದರು.
ಪಟ್ಟಣದ ವಿಶ್ವ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ 21ನೇ ಮನೆ ಮನೆ ಸಾಹಿತ್ಯಗೋಷ್ಠಿ, ಉಪನ್ಯಾಸ, ಪ್ರತಿಭಾಪುರಸ್ಕಾರ, ಅಭಿನಂದನೆ, ದತ್ತು ಮಕ್ಕಳಿಗೆ ವರ್ಷದ ಅನುದಾನ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹನೆ ಇರಬೇಕು: ನಂತರ ಮಾತನಾಡಿದ ಉಪನ್ಯಾಸಕ ಮಠಪತಿ, ಹೆಣ್ಣಿಗೆ ಮೊದಲು ಸಹನೆ ಎಂಬುದು ಇರಬೇಕು ಹಾಗಾದಾಗ ಮಾತ್ರ ಉತ್ತಮವಾದ ದಾಂಪತ್ಯ ಜೀವನ ನಡೆಸಲು ಸಾದ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದಾಂಪತ್ಯದ ಬಗ್ಗೆ ಉಪನ್ಯಾಸ ನೀಡಿದ ಉಪನ್ಯಾಸಕ ಮಠಪತಿ ಇತ್ತೀಚಿನ ದಿನಗಳಲ್ಲಿ 25 ವರ್ಷಗಳ ದಾಂಪತ್ಯ ಜೀವನವನ್ನು ಕಾಣುವುದು ಕಷ್ಟಸಾಧ್ಯ ಕಾರಣ ಕಂಪ್ಯೂಟರ್‌ಗಳ ಮುಂದೆ ಕುಳಿತು ವೆಬ್‌ಸೈಟ್‌ಗಳಲ್ಲಿ ಮದುವೆಯಾಗಿ ನಂತರ ಮುರಿದು ಬೀಳುವಂತಹ ಘಟನೆಗಳನ್ನು ಕಾಣುತಿದ್ದೆವೆ ಎಂದು ವಿಷಾದ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಹೆಚ್.ಎಮ್.ದಯಾನಂದ್ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುತ್ತೂಟ್ ಫೈನಾನ್ಸ್ ವ್ಯಸ್ಥಾಪಕ ಹಾಗೂ ಡಿಸಿಸಿ ಬ್ಯಾಂಕ್ ವೃತ್ತ ವ್ಯವಸ್ಥಾಪಕ ಯೊಗೀಶ್, ಉಪನ್ಯಾಸಕ ಜಯಣ್ಣಗೌಡ. ಸಾಹಿತಿ ಬೇಲೂರು ಕೃಷ್ಣಮೂರ್ತಿ, ವೈಡಿಡಿ ಕಾಲೇಜು ಪ್ರಾಂಶುಪಾಲರಾದ ಬಿ.ಎಸ್. ರಾಜು, ಉಪನ್ಯಾಸಕ ಸುಂದ್ರೇಶ್ ಮಾತನಾಡಿದರು.
ನಾನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

