ಅಧ್ಯಕ್ಷ, ಉಪಾಧ್ಯಕ್ಷರಿಗೆ ತರಾಟೆ
ಕ.ಪ್ರ.ವಾರ್ತೆ ್ಣ ಹಾರನಹಳ್ಳಿ ್ಣ ಜೂ. 30
ಹಾರನಹಳ್ಳಿ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಕಚೇರಿಗೆ ನುಗ್ಗಿ ಗ್ರಾ.ಪಂ.ಅಧ್ಯಕ್ಷ ರೇಣುಕಾ ಹಾಗೂ ಉಪಾಧ್ಯಕ್ಷ ಯರೇಹಳ್ಳಿ ಬಸವರಾಜ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.
ಹಾರನಹಳ್ಳಿ ಮೇಲಿನ ಹೆಬ್ಬಾಗಿಲಿನಲ್ಲಿ ಕಳೆದ 2-3 ತಿಂಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು ಯಾವುದೇ ಜನಪ್ರತಿನಿಧಿಗಳಾಗಲೀ ಅಥವಾ ಮುಖಂಡರಾಗಲಿ ಗಮನಕೊಡದೆ ಮೂಖ ಪ್ರೇಕ್ಷಕರಂತೆ ಕುಳಿತಿರುವ ಗ್ರಾ.ಪಂ.ಅಧ್ಯಕ್ಷಉಪಾಧ್ಯಕ್ಷ ಹಾಗೂ ಆಡಳಿತ ವರ್ಗದ ವಿರುದ್ಧ ಕಿಡಿಕಾರಿದರು
ಹಬ್ಬುತ್ತಿರುವ ರೋಗ: ಹಾರನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮದ ಹಲವು ಭಾಗಗಳಲ್ಲಿ ಚರಂಡಿಗಳು ತುಂಬಿ ಕೆಟ್ಟ ನಾತ ಬರುತ್ತಿದ್ದರೂ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳು ಸ್ವಚ್ಛತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗೂ ಜನಗಳಿಗೆ ಇದರಿಂದ ಮಲೇರಿಯಾ, ಚಿಕೂನ್‌ಗುನ್ಯ, ಡೆಂಘೀ ಹಬ್ಬಿ ಜನರನ್ನು ನಿದ್ದೆಗೆಡಿಸಿದರೂ ಕೂಡ ಯಾರು ಇದರ ಬಗ್ಗೆ ಗಮನ ಹರಿಸುತ್ತಿಲ್ಲವೆಂದು ಗ್ರಾಮಸ್ಥರು ಟೀಕಿಸಿದರು.
ಗ್ರಾಮ ಪಂಚಾಯತಿ ಸದಸ್ಯ ನಂದೀಶ್ ಮಾತನಾಡಿ, ಈಗಾಗಲೇ ಹಾರನಹಳ್ಳಿ ಗ್ರಾಮಕ್ಕೆ ನೀರಿನ ಭವಣೆ ತಪ್ಪಿಸಲು ಜಿಲ್ಲಾ ಪಂಚಾಯತಿ ವತಿಯಿಂದ ಗ್ರಾಮದ ಮೇಲಿನ ಹೆಬ್ಬಾಗಿಲು ಹಾಗೂ ಜನತಾ ಬಡಾವಣೆಗೆ 2 ಕೊಳವೆಬಾವಿಗಳನ್ನು ಕೊರೆಯಿಸುವ ಬಗ್ಗೆ ಶಾಸಕರು ಜಿಲ್ಲಾ ಪಂಚಾಯಿತಿ ಸದಸ್ಯರು ತಕ್ಷಣ ಕ್ರಮ ಕೈಗೊಳ್ಳಬೇಕೇಂದು ಒತ್ತಾಯಿಸಿದರು.
ಪರ್ಯಾಯ ವ್ಯವಸ್ಥೆ: ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಓಂಕಾರಮೂರ್ತಿ ಮಾತನಾಡಿ, ಪಂಚಾಯ್ತಿ ಕಾರ್ಯಾಲಯಕ್ಕೆ ಸುಣ್ಣಬಣ್ಣ ಚುರ್ಕಿ ಹಾಕುವ ಕಾಮಗಾರಿಗಳನ್ನು ನಿಧಾನವಾಗಿ ಮಾಡಿ ಗ್ರಾಮದ ಸಮಸ್ಯೆಗಳಾದ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಹಾಗೂ ಚರಂಡಿ ಸ್ವಚ್ಛಗೊಳಿಸುವ ಕಾಮಗಾರಿಯನ್ನು ಆದಷ್ಟು ಬೇಗ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಗ್ರಾ.ಪಂ.ಅಧ್ಯಕ್ಷರಾದ ರೇಣುಕ ಮಾತನಾಡಿ ಸರ್ಕಾರದಿಂದ ಕುಡಿಯುವ ನೀರಿನ ಯೋಜನೆಗೆ ಟ್ಯಾಂಕರ್ ಮುಖಾಂತರ ನೀರಿನ ವ್ಯವಸ್ಥೆ ಮಾಡಿಸಲಾಗುತ್ತದೆ, ಕೊಳವೆ ಬಾವಿ ಕೊರೆಯಿಸಲು ಶಾಸಕರು ಜಿಲ್ಲಾ ಪಂಚಾಯತ್ ಸದಸ್ಯರಿಗೆ ಮನವಿ ಮಾಡುವುದಾಗಿ ತಿಳಿಸಿದರು.
ಕಂದಾಯ ವಸೂಲಿ ಇಳಿಕೆ: ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಶಾರದಮ್ಮ ಮಾತನಾಡಿ, ಬರಗಾಲದ ಪರಿಸ್ಥಿತಿಯಲ್ಲಿ ಕಂದಾಯ ವಸೂಲಾತಿ ಕಡಿಮೆಯಾಗುತ್ತಿದ್ದು ಇದರಿಂದ ಪಂಚಾಯತಿ ನಿರ್ವಹಣೆ ಮಾಡಲು ಕಷ್ಟವಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಕೆಲವು ಭಾಗದಿಂದ ಆಗಮಿಸಿದ್ದ ಗ್ರಾಮಸ್ಥರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

